ಭ್ರಷ್ಟಾಚಾರ ನಿಗ್ರಹ ದಳದಿಂದ ವಿದ್ಯಾರ್ಥಿಗಳೊಂದಿಗೆ ಸಂವಾದ

 ಕೊಪ್ಪಳದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವತಿಯಿಂದ ನಗರದ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಎಸಿಬಿ ಕಾರ್ಯವಿಧಾನ ಕುರಿತು ವಿದ್ಯಾರ್ಥಿಗಳೊಂದಿಗೆ ಶನಿವಾರದಂದು ಸಂವಾದ ಕಾರ್ಯಕ್ರಮ ಏರ್ಪಡಿಸಲಾಯಿತು.
ಭ್ರಷ್ಟಾಚಾರ ನಿಗ್ರಹ ದಳದ ಪ್ರಭಾರಿ ಡಿವೈಎಸ್‍ಪಿ ಮೌನೇbಶ್ವರ ಮಾಲಿಪಾಟೀಲ್ ಅವರು ಎಸಿಬಿ ಕಾರ್ಯ ವಿಧಾನ ಕುರಿತಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಗವಿಸಿದ್ದೇಶ್ವರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಗವಿಸಿದ್ದಪ್ಪ ಕೊಪ್ಪಳ ಅವರ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply