You are here
Home > Koppal News-1 > koppal news > ಮಕ್ಕಳಿಗೆ ತಪ್ಪದೆ ದಡಾರ-ರುಬೆಲ್ಲಾ ಲಸಿಕೆ ಹಾಕಿಸಿ: ರಾಘವೇಂದ್ರ ಹಿಟ್ನಾಳ

ಮಕ್ಕಳಿಗೆ ತಪ್ಪದೆ ದಡಾರ-ರುಬೆಲ್ಲಾ ಲಸಿಕೆ ಹಾಕಿಸಿ: ರಾಘವೇಂದ್ರ ಹಿಟ್ನಾಳ

ಕೊಪ್ಪಳ : ಮಕ್ಕಳಿಗೆ ತೀವ್ರವಾಗಿ ಕಾಡುವ ರೋಗಗಳ ತಡೆಗಾಗಿ ರಾಷ್ಟ್ರೀಯ ಆರೋಗ್ಯ ಮಿಷನ್ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಫೆ. ೦೭ ರಿಂದ ೨೮ ರವರೆಗೆ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ೦೯ ತಿಂಗಳಿನಿಂದ ೧೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸುವಂತೆ  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್  ಕರೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಕೊಪ್ಪಳದಲ್ಲಿ ಆಯೋಜಿಸಿದ ದಡಾರ-ರುಬೆಲ್ಲಾ ಲಸಿಕಾ ಜಾಗೃತಿ ಜಾಥಾ ಹಾಗೂ ಬೈಕ್ ರ್‍ಯಾಲಿಗೆ ನಗರದ ಗೌರಿಶಂಕರ ದೇವಸ್ಥಾನ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಲು, ಮಕ್ಕಳು, ಸ್ವಸ್ಥ್ಯರಾಗಿರಬೇಕು. ಮಕ್ಕಳೇ ಭವಿಷ್ಯದ ಪ್ರಜೆಗಳಾಗಿರುವುದರಿಂದ, ಮಕ್ಕಳ ಆರೋಗ್ಯದ ಕುರಿತು ಸರ್ಕಾರ ವಿಶೇಷ ಕಾಳಜಿ ವಹಿಸುತ್ತದೆ. ಮಕ್ಕಳನ್ನು ಕಾಡುವ ವಿವಿಧ ರೋಗಗಳ ತಡೆಗೆ ದಡಾರ-ರುಬೆಲ್ಲಾ ಲಸಿಕೆ ಅಭಿಯಾನವನ್ನು ಫೆ. ೦೭ ರಿಂದ ೨೮ ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ೦೯ ತಿಂಗಳಿನಿಂದ ೧೫ ವರ್ಷದೊಳಗಿನ ಸುಮಾರು ೪.೫ ಲಕ್ಷ ಮಕ್ಕಳಿಗೆ ಈ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಯಾವುದೇ ಮಕ್ಕಳು ಲಸಿಕೆಯಿಂದ ವಂಚಿತವಾಗಬಾರದು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಪೂರ್ವ ತಯಾರಿಯೊಂದಿಗೆ, ಸಮರ್ಪಕವಾಗಿ ಮಕ್ಕಳಿಗೆ ಲಸಿಕೆ ತಲುಪಿಸುವ ಕಾರ್ಯ ಕೈಗೊಳ್ಳಬೇಕು. ಮಕ್ಕಳಿಗೆ ಲಸಿಕೆ ಹಾಕಿಸುವ ನಿಟ್ಟಿನಲ್ಲಿ ತಂದೆ-ತಾಯಿಯರ ಪಾತ್ರ ಮಹತ್ವದ್ದಾಗಿದ್ದು, ಸ್ವಯಂ ಪ್ರೇರಣೆಯಿಂದ ಅವರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಲು ಮುಂದಾಗಬೇಕು. ಲಸಿಕಾ ಅಭಿಯಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಾಧ್ಯಮಗಳು ಕೂಡ ಸರ್ಕಾರದ ಕಾರ್ಯಕ್ಕೆ ಕೈಜೋಡಿಸಬೇಕು ಎಂದು  ಕೆ. ರಾಘವೇಂದ್ರ ಹಿಟ್ನಾಳ್ ಮನವಿ ಮಾಡಿದರು.

???????????????????????????????
ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಅಲಕಾನಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದಾನರೆಡ್ಡಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಎಸ್.ಕೆ. ದೇಸಾಯಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ್, ಡಾ. ಕಟ್ಟಿಮನಿ, ಶಿವಾನಂದ ಹೊದ್ಲೂರ, ಡಾ. ಶ್ರೀನಿವಾಸ ಹ್ಯಾಟಿ, ಡಾ. ಕರಮುಡಿ,
ನಗರದ ಸುಮಾರು ೨ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡರು.

???????????????????????????????

Leave a Reply

Top