You are here
Home > Koppal News-1 > koppal news > ವಿದ್ಯಾರ್ಥಿ ಒಕ್ಕೂಟದ ಉದ್ಘಾಟನೆ

ವಿದ್ಯಾರ್ಥಿ ಒಕ್ಕೂಟದ ಉದ್ಘಾಟನೆ

ಕೊಪ್ಪಳಗರದ ಶ್ರೀ ಗವಿಸಿದ್ಧೇಶ್ವರ ಪದವಿ ಕಾಲೇಜಿನ ೨೦೧೬-೧೭ನೇ ಸಾಲಿನ ವಿದ್ಯಾರ್ಥಿ ಒಕ್ಕೂಟವನ್ನು ದಿನಾಂಕ ೨೧.೦೯.೨೦೧೬, ಬುಧುವಾರದಂದು ಉದ್ಘಾಟಿಸಲಾಯಿತು. ಉದ್ಘಾಟನೆಯನ್ನು ನೆರವೇರಿಸಿದ ಹೊಸಪೇಟೆ ವಿಜಯನಗರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರು ಡಾ|| ಶಿವಾನಂದ, ಇವರು ಮಾತನಾಡುತ್ತ ವಿದ್ಯಾರ್ಥಿಗಳು ವಿದ್ಯಾರ್ಥಿ ಒಕ್ಕೂಟದ ಕಾರ್ಯ ಚಟುವಟಿಕೆಗಳ ಕ್ರೀಯಾಶೀಲರಾಗಿ ಭಾಗವಹಿಸಬೇಕೆಂದು ಕರೆ ನೀಡಿದರು. ಅನೇಕ ನಾಯಕರುಗಳು ವಿದ್ಯಾರ್ಥಿ ಜೀವನದಿಂದಲೇ ಕ್ರೀಯಾಶೀಲರಾಗಿ ಒಕ್ಕೂಟದ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಿದ್ದರು ಎಂದು ಹೇಳಿದರು. ವ್ಯಕ್ತಿತ್ವ ವಿಕಸನಕ್ಕೆ ಬಸವಾದಿ ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು. ಕಾಲೇಜು ಜೀವನದ ಬದುಕನ್ನು ಅನುಭವಿಸುವುದರ ಜೊತೆಗೆ ಜ್ಞಾನ ಸಂಪಾದನೆಯನ್ನು ಮಾಡಿಕೊಳ್ಳುವದರ ಮೂಲಕ ಜೀವನವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಪ್ರೊ.ಎಂ.ಎಸ್.ದಾದ್ಮಿ ಅಧ್ಯಕ್ಷತೆಯನ್ನು ವಹಿಸಿದ್ದರು. ಆಡಳಿತಾಧಿಕಾರಿಗಳಾದ ಡಾ|| ಆರ್.ಮರೆಗೌಡ ಹಾಗೂ ವಿದ್ಯಾರ್ಥಿ ಒಕ್ಕೂಟದ ಕಾರ್ಯಧ್ಯಕ್ಷರಾದ ಪ್ರೊ.ಬಿ.ಡಿ.ಕೇಶವನ್ ವೇದಿಕೆಯ ಮೇಲೆ ಆಸಿನರಾಗಿದ್ದರು. ಪ್ರಾರಂಭದಲ್ಲಿ ಕು. ವಿಭಾ ಕಟ್ಟಿ ಪ್ರಾರ್ಥಿಸಿದರು. ಪ್ರೊ.ಬಿ.ಡಿ.ಕೇಶವನ್ ಪ್ರಸ್ತಾವಿಕವಾಗಿ ಮಾತನಾಡಿದರು. ಅಶೋಕ ಓಜಿನಹಳ್ಳಿ ಕಾರ್ಯಕ್ರಮ ನಿರೂಪಿಸಿದರು. ಕೊನೆಗೆ ಡಾ|| ದಯಾನಂದ ಸಾಳುಂಕೆ ವಂದಿಸಿದರು.

Leave a Reply

Top