ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ೧೦ ಲಕ್ಷ ರೂ- ಶಾಸಕ ರಾಘವೇಂದ್ರ ಹಿಟ್ನಾಳ

????????????????????????????????????

 ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪನೆಯ ಮೂಲಕ ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ನಗರದ ಸಿರಸಪ್ಪಯ್ಯನಮಠದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

????????????????????????????????????

ಹಿಂದುಳಿದ ವರ್ಗದ ಸಮಾಜಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪಣತೊಟ್ಟಿದ್ದು, ಕೊಪ್ಪಳದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ತಮ್ಮ ಶಾಸಕರ ಅನುದಾನದಲ್ಲಿ ೧೦ ಲಕ್ಷ ರೂ. ನೀಡಲಾಗುವುದು. ಪ್ರತಿ ಸಮಾಜಕ್ಕೂ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದೆ. ಈ ಮೂಲಕ ಎಲ್ಲ ಸಮುದಾಯಗಳ ಸಬಲೀಕರಣಕ್ಕೆ ಮುಂದಾಗಿದೆ. ವಿಶ್ವಕರ್ಮ ಜನಾಂಗದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ವಿಶ್ವಕರ್ಮ ಅಭಿವೃದ್ಧಿ ನಿಗಮವನ್ನು ಪ್ರತ್ಯೇಕವಾಗಿ ಘೋಷಣೆ ಮಾಡಿ ವಿವಿಧ ಯೋಜನೆಯಡಿ ಅನುದಾನ ನೀಡುತ್ತಿದೆ. ಬಸವಣ್ಣನ ಅನುಭವ ಮಂಟಪದಂತೆ ಈಗಿನ ಸಚಿವ ಸಂಪುಟ ಅಭಿವೃದ್ಧಿ ಪಥದಲ್ಲಿ ಕೆಲಸ ಮಾಡುತ್ತಿದೆ ಎಂದರು. ದಾರ್ಶನಿಕರ ಜಯಂತಿಗಳ ಆಚರಣೆಗೆ ರಾಜ್ಯ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ಶೋಷಿತ ಹಾಗೂ ಹಿಂದುಳಿದ ವರ್ಗ ಸಮುದಾಯದವರೂ ಕೂಡ ಸಂಘಟಿತರಾಗಿ ವಿವಿಧ ಸೌಲಭ್ಯ ಪಡೆಯಲಿ ಎನ್ನುವ ಉದ್ದೇಶದಿಂದ ಜಯಂತಿ ಆಚರಣೆ ಮಾಡಲಾಗುತ್ತಿದೆ. ವಿಶ್ವಕರ್ಮ ಸಮಾಜ ಸೇರಿದಂತೆ ಹಿಂದುಳಿದ ಎಲ್ಲ ಸಮುದಾಯದ ಜನತೆ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿದರೆ ಸಮಾಜದ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.

ಸಮಾರಂಭಕ್ಕೂ ಮುನ್ನ ನಗರದ ಗೋವಿಂದರಾಯ ದೇವಸ್ಥಾನದಿಂದ ಸಿರಸಪ್ಪಯ್ಯನ ಮಠದ ವರೆಗೂ ವಿಶ್ವಕರ್ಮರ ಭಾವಚಿತ್ರದ ಮೆರವಣಿಗೆ ರಥದಲ್ಲಿ ಅದ್ಧೂರಿಯಿಂದ ಸಾಗಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವಿವಿಧ ವೇಷಧಾರಿಗಳ ನೃತ್ಯವು ನೋಡುಗರ ಗಮನ ಸೆಳೆಯಿತು. ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಮೆರವಣಿಗೆಗೆ ಚಾಲನೆ ನೀಡಿದರು.

Please follow and like us:
error