ಸೆ. ೦೩ ರಂದು ರಾಷ್ಟ್ರೀಯ ಹೆದ್ದಾರಿ-೬೩ ಚತುಷ್ಪಥವನ್ನಾಗಿಸುವ ಕಾಮಗಾರಿ ಸಮಾರಂಭ ಆಮಂತ್ರಣ ಪತ್ರಿಕೆ

ಕೊಪ್ಪಳ – ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯವರ ಸಹಯೋಗದಲ್ಲಿ ರಾಷ್ಟ್ರೀಯ ಹೆದ್ದಾರಿ-೬೩ ರ ಹುಬ್ಬಳ್ಳಿ-ಹೊಸಪೇಟೆ ವಿಭಾಗದ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸುವ ಕಾಮಗಾರಿಯೂ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಮಾರಂಭ ಸೆ. ೦೩ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.k2  k1

ರಾಷ್ಟ್ರೀಯ ಹೆದ್ದಾರಿ-೬೩ ರ ಹುಬ್ಬಳ್ಳಿ-ಹೊಸಪೇಟೆ ವಿಭಾಗದ ೧೪೩. ೨೯ ಮೀ. ಉದ್ದ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸುವ ಕಾಮಗಾರಿ, ರಾ.ಹೆ-೬೩ ಹೊಸಪೇಟೆ-ಬಳ್ಳಾರಿ ಕರ್ನಾಟಕ/ಆಂಧ್ರ ಪ್ರದೇಶ ಗಡಿ ವಿಭಾಗದ ಒಟ್ಟು ೯೫. ೩೭೦ ಕಿ.ಮೀ. ಉದ್ದ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸುವ ಕಾಮಗಾರಿ. ರಾ.ಹೆ- ೦೪ ರ ಹಾವೇರಿ-ಹುಬ್ಬಳ್ಳಿ ವಿಭಾಗದಲ್ಲಿ ೦೪ ವಿಯುಪಿ, ೦೨ ಎಲ್.ವಿಯುಪಿ., ೦೪ ಎಫ್‌ಓಬಿ ಮತ್ತು ಸರ್ವಿಸ್ ರಸ್ತೆಗಳ ನಿರ್ಮಾಣ. ರಾ.ಹೆ-೧೩ರ ಹುನಗುಂದ-ಹೊಸಪೇಟೆ ವಿಭಾಗದ ಕುಷ್ಟಗಿ ಪಟ್ಟಣದಲ್ಲಿ ಕಿ.ಮೀ. ೨೩೩. ೭೫೦ ರಲ್ಲಿ ಮೇಲ್ಸೇತುವೆ ಹಾಗೂ ಕಿ.ಮೀ. ೨೩೨. ೯೦೦ ರಲ್ಲಿ ವಿಯುಪಿ ನಿರ್ಮಾಣ. ರಾ.ಹೆ-೬೩ ಮತ್ತು ರಾ.ಹೆ.-೨೧೮ ಸಂಪರ್ಕಿಸುವ ಹುಬ್ಬಳ್ಳಿ ಬೈಪಾಸ್ ನಿರ್ಮಾಣ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸುವ ಸಮಾರಂಭ ಸೆ. ೦೩ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ನೌಕಾಯಾನ ಸಚಿವ ನಿತಿನ್ ಗಡ್ಕರಿ ಅವರು ಕಾಮಗಾರಿಗಳ ಶಿಲಾನ್ಯಾಸ ನೆರವೇರಿಸುವರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್, ಕೇಂದ್ರ ಕಾರ್ಯಕ್ರಮ ಅನುಷ್ಠಾನ ಮತ್ತು ಸಾಂಖ್ಯಿಕ ಸಚಿವ ಡಿ.ವಿ. ಸದಾನಂದಗೌಡ, ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಮತ್ತು ನೌಕಾಯಾನ ರಾಜ್ಯ ಸಚಿವ ಪಿ. ರಾಧಾಕೃಷ್ಣನ್, ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಮತ್ತು ನೌಕಾಯಾನ ಹಾಗೂ ರಾಸಾಯನಿಕ ಹಾಗೂ ರಸಗೊಬ್ಬರ ರಾಜ್ಯ ಸಚಿವ ಮನ್ಷುಕ್ ಮಾಂಡವ್ಯ, ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ರಾಜ್ಯ ಸಚಿವ ರಮೇಶ್ ಜಿಗಜಿಣಗಿ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಎಚ್.ಕೆ. ಪಾಟೀಲ್, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ ಕುಲಕರ್ಣಿ, ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ, ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸಂಸತ್ ಸದಸ್ಯರುಗಳಾದ ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಕರಡಿ ಸಂಗಣ್ಣ, ಬಿ. ಶ್ರೀರಾಮುಲು, ಜಿ.ಎಂ. ಸಿದ್ದೇಶ್ವರ್, ಪಿ.ಸಿ. ಗದ್ದಿಗೌಡರ್, ಶಿವಕುಮಾರ್ ಉದಾಸಿ ಅವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು ಪಾಲ್ಗೊಳ್ಳುವರು.

Please follow and like us:
error