ಕರ್ನಾಟಕ ರೈತ ಸಂಘದ ಧೀಮಂತ ಕೆ.ಎಸ್.ಪುಟ್ಟಣ್ಣಯ್ಯ ಇನ್ನಿಲ್ಲ

ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕು, ಕಸಬಾ ಹೋಬಳಿ ಕ್ಯಾತನಹಳ್ಳಿ ಗ್ರಾಮದ ಕೆ.ಎಸ್. ಶ್ರೀಕಂಠೇಗೌಡ ಹಾಗೂ ಶ್ರೀಮತಿ ಕೆ.ಎಸ್. ಶಾರದಮ್ಮ ದಂಪತಿಯ ಜೇಷ್ಠಪುತ್ರರಾಗಿ ದಿನಾಂಕ 23.12.1949ರಲ್ಲಿ ಜನಿಸಿದ ಕೆ.ಎಸ್. ಪುಟ್ಟಣ್ಣಯ್ಯ ಕರ್ನಾಟಕ ರೈತ ಸಂಘ ಕಂಡಂತಹ ಏಕೈಕ ಧೀಮಂತ ಹೋರಾಟಗಾರ. ವಿದ್ಯಾಭ್ಯಾಸ ಇವರು ತಮ್ಮ ಹುಟ್ಟೂರಿನಲ್ಲಿಯೇ ಎಸ್.ಎಸ್.ಎಲ್.ಸಿ.ಯನ್ನು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮುಗಿಸಿ ಮೈಸೂರಿನಲ್ಲಿರುವ ಪ್ರತಿಷ್ಠಿತ ಸೆಂಟ್ ಫಿಲೋಮಿನಾ ಶಾಲೆಯಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಮಾಡಿ ನಂತರ ಇದೇ ಮೈಸೂರಿನ ಡಿ. ಬನುಮಯ್ಯ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದಿರುತ್ತಾರೆ. ಈ ರೀತಿ ವಿದ್ಯಾರ್ಥಿಯಾಗಿದ್ದಾಗಲೇ ಹಳ್ಳಿಗಾಡುಗಳಲ್ಲಿ ಕೃಷಿ ಕಾರ್ಮಿಕರು, ಕೂಲಿ ಕಾರ್ಮಿಕರು ಹಾಗೂ ಬಡ ಮಹಿಳೆಯರುಗಳು ಅನುಭವಿಸುತ್ತಿದ್ದ ಯಾತನಮಯ ಜೀವನಗಳನ್ನು ಕಣ್ಣಾರೆ ಕಂಡಿದ್ದ ಈ ಪದವೀದರ ಕೆ.ಎಸ್. ಪುಟ್ಟಣ್ಣಯ್ಯ ಅವರು ತಮ್ಮ ಮುಂದಿನ ವ್ಯಾಸಂಗಕ್ಕೆ ಹಾಗೂ ಸರ್ಕಾರಿ ನೌಕರಿಗೆ ಎಡತಾಕದೆ ಧೀನದಲಿತರುಗಳ ಏಳಿಗೆಗಾಗಿ ದುಡಿಯಬೇಕೆಂಬ ಅಚಲ ವಿಶ್ವಾಸದಿಂದ ಮಂಡ್ಯ ಜಿಲ್ಲೆಯಲ್ಲಿ…

Read More