ನಗರ, ಪಟ್ಟಣಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ- ವಿನಯಕುಮಾರ್ ಸೊರಕೆ

  ಕೊಪ್ಪಳ ನಗರವೂ ಸೇರಿದಂತೆ ಜಿಲ್ಲೆಯ ಯಾವುದೇ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.   ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ನಗರಾಭಿವೃದ್ಧಿ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನೆ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ಬೇಸಿಗೆಯಲ್ಲಿ ಕುಡಿಯುವ ನೀರಿನ ಸ್ಥಿತಿಗತಿ ಹಾಗೂ ಇಲಾಖೆಯ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲಿಸಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತಿದೆ.  ಕೊಪ್ಪಳ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಆಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು.  ಈ ಕುರಿತು ಕ್ರಿಯಾ ಯೋಜನೆ ರೂಪಿಸಿ, ಇಲಾಖೆಗೆ ಸಲ್ಲಿಸಿದಲ್ಲಿ, ಕೂಡಲೆ ಅನುಮೋದನೆ ನೀಡಿ, ಅಗತ್ಯ ಅನುದಾನ ಬಿಡುಗಡೆ…

Read More