ಕೊಪ್ಪಳ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

 ಮೂರು ವರ್ಷಗಳ ಹಿಂದೆ ಆರಂಭವಾಗಿರುವ ಸರ್ಕಾರಿ ಮಹಿಳಾ ಕಾಲೇಜು ಸ್ವಂತ ಕಟ್ಟಡವಿಲ್ಲದೆ ಇರುವುದರಿಂದ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಇಂದು ಬೆಳಗ್ಗೆಯಿಂದಲೇ ಎಲ್ಲ ತರಗತಿಗಳನ್ನು ಬಹಿಷ್ಕರಿಸಿ ಮೌನವಾಗಿ ಧರಣಿ ನಡೆಸಿದ ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನಾ ಸ್ಥಳಕ್ಕೆ ಶಾಸಕ, ಸಚಿವರು ಬಂದು ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯನ್ನು ಹಿಂದೆ ಪಡೆದು ತರಗತಿಗೆ ಹಾಜರಾಗುವಂತೆ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯರ ಮನವೊಲಿಕೆ ಯತ್ನ ನಡೆಸಿ ವಿಫಲರಾದರು. ಯಾವುದೇ ಕಾರಣಕ್ಕೂ ಧರಣಿ ಹಿಂಪಡೆಯುವುದಿಲ್ಲ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದು, ಕಾಲೇಜು ಆರಂಭವಾಗಿ ಸುಮಾರು ಮೂರು ವರ್ಷಗಳಾಗುತ್ತಿವೆ. ಕಾಲೇಜಿಗೆ ಸ್ವಂತ ಕಟ್ಟಡವಿಲ್ಲ ಎಂದು ದೂರಿದರು.ಕಟ್ಟಡವಿಲ್ಲದ ಕಾರಣ ಪ್ರತಿ ದಿನವೂ ಕೊಠಡಿಗಳನ್ನು ಹುಡುಕಿಕೊಂಡು ಹೋಗಿ ಪಾಠ ಕೇಳಬೇಕಾದ ಮತ್ತು ಪಾಠ ಮಾಡಬೇಕಾದ ಅನಿವಾರ್ಯತೆ ಇಲ್ಲಿರುವ ಉಪನ್ಯಾಸಕರಿಗೆ ಹಾಗೂ ವಿದ್ಯಾರ್ಥಿನಿಯರಿಗಿದೆ. ಅಲ್ಲದೆ, ಮೂಲಭೂತ ಸೌಲಭ್ಯವಿಲ್ಲ.…

Read More