ಹ್ಯಾಟ್ರಿಕ್ ಸಾಧಿಸಿದ ನಾಗರಾಜ್ ಜುಮ್ಮಣ್ಣವರ್, ರಾಜ್ಯ ಪರಿಷತ್ತಿಗೆ ಆಸಿಫ್ ಆಯ್ಕೆ ಆಯ್ಕೆ ರಾಜ್ಯ ಪರಿಷತ್ತಿಗೆ ಆಸಿಫ್
ಕೊಪ್ಪಳ : ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ನಾಗರಾಜ್ ಜುಮ್ಮಣ್ಣವರ ಅವಿರೋಧವಾಗಿ ಆಯ್ಕೆಯಾಗುವದರ ಮೂಲಕ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ. ಅಧ್ಯಕ್ಷರಾಗಿ ಸತತ ಮೂರನೇ ಬಾರಿ ಆಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಪರಿಷತ್ ಸದಸ್ಯರಾಗಿ ಕೊಪ್ಪಳ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾದ ಅಸೀಫ್ ಅಲಿ ಆಯ್ಕೆಯಾಗಿದ್ದಾರೆ.
ಖಜಾಂಚಿಯಾಗಿ ಜಯತೀರ್ಥ ದೇಸಾಯಿ ಆಯ್ಕೆಯಾಗಿದ್ದಾರೆ. ಅವಿರೋಧ ಆಯ್ಕೆ ಹಿನ್ನೆಲೆಯಲ್ಲಿ ಬೆಂಬಲಿಗರು ನಗರದ ಅಶೋಕ್ ಸರ್ಕಲ್ ನಲ್ಲಿ ಸಂಭ್ರಮಾಚರಣೆ ಮಾಡಿದರು.
Comments are closed.