ನ.30ರಂದು ಕೊಪ್ಪಳ ವಿಶ್ವವಿದ್ಯಾಲಯದಿಂದ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ

0

Get real time updates directly on you device, subscribe now.

ಕೊಪ್ಪಳ ): ಕೊಪ್ಪಳ ವಿಶ್ವವಿದ್ಯಾಲಯದ ವತಿಯಿಂದ “ಕರ್ನಾಟಕ ಸುವರ್ಣ ಸಂಭ್ರಮ” ಕಾರ್ಯಕ್ರಮವನ್ನು ನವೆಂಬರ್ 30ರ ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕನ್ನಡ ಸಂಘ ಉದ್ಘಾಟಿಸುವರು. ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಅವರು `ಕಲ್ಯಾಣ ವಾಣಿ’ ಸುವರ್ಣ ಸಂಭ್ರಮ ಸಂಚಿಕೆ ಬಿಡುಗಡೆ ಮಾಡುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ, ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮುನಿರಾಜು ಎಂ., ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ.ನಾಗರಾಜಮೂರ್ತಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಂ, ಬೆಂಗಳೂರಿನ ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಡಾ.ರಾಜಶೇಖರ ಹತಗುಂದಿ ಪಾಲ್ಗೊಳ್ಳುವರು.
ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ.ರವಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಸ್ನಾತಕೋತ್ತರ ಕೇಂದ್ರಗಳ ನಿರ್ದೇಶಕರು, ಸಹಾಯಕ ಪ್ರಾಧ್ಯಾಪಕರು, ಹಿರಿಯ ಸಾಹಿತಿಗಳು, ಕೊಪ್ಪಳ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳು, ಕುಲಸಚಿವರು, ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ಬೋಧಕರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!