ಡಿಸೆಂಬರ್ 3ರಂದು ಕೊಪ್ಪಳದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ
): ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ನಗರಸಭೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ಎಮ್.ಆರ್,ಡಬ್ಲೂ, ಯು.ಆರ್.ಡಬ್ಲೂ, ವಿ.ಆರ್.ಡಬ್ಲೂ, ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟ ಮತ್ತು ಜಿಲ್ಲೆಯ ವಿವಿಧ ವಿಕಲಚೇತನರ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ-2024ರ ವೇದಿಕೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಡಿಸೆಂಬರ್ 3ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ ಹಾಗೂ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ ಅವರು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ ಅವರು ಭಾಗವಹಿಸುವರು.
ಕಾರ್ಯಕ್ರಮದ ಅಂಗವಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ ಅವರು ಕಾನೂನು ಅರಿವು ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ ಪಾಲ್ಗೊಳ್ಳುವರು. “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವೈಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ” ಎಂಬುದು ವಿಶ್ವ ವಿಕಲಚೇತನರ ದಿನಾಚರಣೆ-2024ರ ಘೋಷ ವಾಕ್ಯವಾಗಿದೆ. ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಡಿ.3ರ ಬೆಳಿಗ್ಗೆ 9 ಗಂಟೆಗೆ ನಗರದ ಕೇಂದ್ರಿಯ ಬಸ್ ನಿಲ್ದಾಣದಿಂದ ತಾಲೂಕು ಕ್ರೀಡಾಂಗಣದವರೆಗೆ ನಡೆಯಲಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.