ಬೆಂಬಲ ಬೆಲೆಯಲ್ಲಿ ಭತ್ತ, ಬಿಳಿಜೋಳ ಖರೀದಿ: ರೈತರು ನೋಂದಾಯಿಸಿಕೊಳ್ಳಿ

Get real time updates directly on you device, subscribe now.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿಜೋಳ ಖರೀದಿಸಲು ಕೊಪ್ಪಳ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿರುವ ಖರೀದಿ ಕೇಂದ್ರಗಳಲ್ಲಿ ರೈತರು ನೋಂದಾಯಿಸಿಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೆಶಕರು ತಿಳಿಸಿದ್ದಾರೆ.
2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಖರೀದಿ ಕೇಂದ್ರಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದೆ. ಸಾಮಾನ್ಯ ಭತ್ತಕ್ಕೆ 2300 ರೂ., ಗ್ರೇಡ್-ಎ ಭತ್ತಕ್ಕೆ 2320 ರೂ. ಹಾಗೂ ಹೈಬ್ರಿಡ್ ಬಿಳಿಜೋಳಕ್ಕೆ 3371 ರೂ. ಮತ್ತು ಮಾಲ್ದಂಡಿ ಬಿಳಿಜೋಳಕ್ಕೆ 3421 ರೂ. ರಂತೆ ಪ್ರತಿ ಕ್ವಿಂಟಲ್‌ಗೆ ದರ ನಿಗದಿಪಡಿಸಿದ್ದು, ಭತ್ತ ಹಾಗೂ ಜೋಳ ಖರೀದಿಗೆ ರೈತರ ನೋಂದಣಿ ಕಾರ್ಯವು ಡಿಸೆಂಬರ್ 1 ರಿಂದ 2025ರ ಫೆಬ್ರವರಿ 28ರ ವರೆಗೆ ಇರುತ್ತದೆ.
ಕೊಪ್ಪಳದಲ್ಲಿ ಭತ್ತ ಮತ್ತು ಬಿಳಿಜೋಳ ಖರೀದಿ ಕೇಂದ್ರ, ಗಂಗಾವತಿ ಹಾಗೂ ಕಾರಟಗಿಯಲ್ಲಿ ಭತ್ತ ಖರೀದಿ ಕೇಂದ್ರಗಳು ಮತ್ತು ಕುಷ್ಟಗಿ, ಯಲಬುರ್ಗಾ ಹಾಗೂ ಕನಕಗಿರಿಯಲ್ಲಿ ಜೋಳ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿ ಎಕರೆಗೆ 25 ಕ್ವಿಂಟಲ್ ನಂತೆ ಪ್ರತಿ ರೈತರಿಂದ ಗರಿಷ್ಠ 50 ಕ್ವಿಂಟಲ್ ಭತ್ತ ಖರೀದಿಸಲಾಗುವುದು. ಬಿಳಿಜೋಳವನ್ನು ಪ್ರತಿ ರೈತರಿಂದ ಎಕರೆಗೆ 10 ಕ್ವಿಂಟಲ್ ನಂತೆ ಗರಿಷ್ಠ 150 ಕ್ವಿಂಟಲ್ ಖರೀದಿಸಲಾಗುವ್ಯದು. ರೈತರು ಸರ್ಕಾರ ನಿಗದಿಪಡಿಸಿದ ಗುಣಮಟ್ಟದ ಭತ್ತ, ಬಿಳಿಜೋಳ ನೀಡುವಂತೆ ಹಾಗೂ ತಮ್ಮ ಸಮೀಪದ ಖರೀದಿ ಕೇಂದ್ರಗಳಿಗೆ ಫ್ರೂಟ್ಸ್ ಐಡಿಯೊಂದಿಗೆ ಭೇಟಿ ನೀಡಿ ನಿಗದಿತ ದಿನಾಂಕದೊಳಗೆ ನೋಂದಣಿ ಮಾಡಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.
****

Get real time updates directly on you device, subscribe now.

Comments are closed.

error: Content is protected !!