ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು: ಕರ್ತವ್ಯಲೋಪಕ್ಕೆ ಡ್ರಗ್ ಕಂಟ್ರೋಲರ್ ಸಸ್ಪೆಂಡ್: ಸಿ.ಎಂ.ಸಿದ್ದರಾಮಯ್ಯ

0

Get real time updates directly on you device, subscribe now.

ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಿದ ಸಿಎಂ*

ಬೆಂಗಳೂರು ನ 30:
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.

ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದರು.

ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದರು.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ ಎಂದರು.

ಲ್ಲಿ ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು

• ನವೆಂಬರ್‌ 11ರಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿನ ಪ್ರಕರಣ ವರದಿಯಾಗಿದೆ.

•ಹಿಮೋಡಯಾಲಿಸಿಸ್‌ ಮತ್ತು ಬಹು ಅಂಗಗಳ ವೈಫಲ್ಯ ಹಾಗೂ ತೀವ್ರತರ ಮೂತ್ರಪಿಂಡದ ಗಾಯದಂತಹ ತೊಂದರೆಗಳ 7 ಪ್ರಕರಣಗಳಲ್ಲಿ , 4ಬಾಣಂತಿಯರು ಸಾವಿಗೀಡಾಗಿದ್ದಾರೆ.

• ಉಳಿದ 3 ರೋಗಿಗಳಲ್ಲಿ 2 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಳ್ಳಾರಿ ವಿಮ್ಸ್‌ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

• ಬಾಣಂತಿಯರ ಸಾವಿನ ಕುತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ.

•ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದ ಎಲ್ಲಾ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

• ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರ.

ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದರು.

 

ಪ್ರಕರಣದ ಕುರಿತಂತೆ ನಡೆದ ಸಭೆಯ ಇತರೆ ಹೈಲೈಟ್ಸ್…

• ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ.

•ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಡ್ರಗ್‌ ಕಂಟ್ರೋಲರ್‌ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಆದೇಶ.

•ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧಾರ.

• ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

*ಉಲ್ಲೇಖಿತ ಡ್ರಗ್ ನಿಂದ ರಾಜ್ಯದ ಇತರೆಡೆಗಳಲ್ಲಿ ಸಮಸ್ಯೆ ಆಗಿದೆಯೇ ಎನ್ನುವ ಬಗ್ಗೆ ತಕ್ಷಣ ಸಮಗ್ರ ವರದಿ ತರಿಸಿಕೊಳ್ಳಲು ಖಡಕ್ ಸೂಚನೆ ನೀಡಿದ ಸಿಎಂ.

ಅಭಿವೃದ್ಧಿ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಒಂದು ಉನ್ನತ ಸಮಿತಿ ರಚಿಸಿ ಒಂದು ವಾರದಲ್ಲಿ ವರದಿ ತರಿಸಿಕೊಳ್ಳಲು ಸೂಚನೆ

*ಮೆಡಿಸಿನ್ ಮಾಫಿಯಾ ನಿಯಂತ್ರಣಕ್ಕೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎನ್ನುವ ಅಭಿಪ್ರಾಯಗಳು ಸಭೆಯಲ್ಲಿ ಹಲವರಿಂದ ವ್ಯಕ್ತವಾದವು. ಮೊದಲಿಗೆ ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯುವುದು ಹಾಗೂ ತಮಿಳುನಾಡು ಮಾದರಿಯಲ್ಲಿ ಡ್ರಗ್ ನಿಯಂತ್ರಣಕ್ಕೆ ಹೊಸ ರೂಪು ರೇಷೆ, ನಿಯಮಾವಳಿ ರಚಿಸುವ ಬಗ್ಗೆ ಚರ್ಚಿಸಲಾಯಿತು.

ಈ ಬಗ್ಗೆ ಹಲವು ರೀತಿಯ ಗಂಭೀರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸೂಚಿಸಿದರು.

Get real time updates directly on you device, subscribe now.

Leave A Reply

Your email address will not be published.

error: Content is protected !!