ಅನುಕಂಪ ಆಧಾರದ ನೇಮಕಾತಿ ಪ್ರಸ್ತಾವನೆಯನ್ನು ಆನ್‌ಲೈನ್ ಮೂಲಕ ಸಲ್ಲಿಸಿ
ಅನುಕಂಪ ಆಧಾರದ ನೇಮಕಾತಿ ಪ್ರಸ್ತಾವನೆಯನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಯ್ಯ ಟಿ.ಎಸ್ ಅವರು ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಅಧಿಸೂಚನೆಯಂತೆ 2024ರ ನವೆಂಬರ್ 19 ರಿಂದ ಅನುಕಂಪ ಆಧಾರಿತ ನೇಮಕಾತಿ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ನಿರ್ವಹಣೆ ಮಾಡಲು ನಿರ್ದೇಶನವಿರುವುದರಿಂದ ಇನ್ನು ಮುಂದೆ ಅನುಕಂಪ ಆಧಾರಿತ ನೇಮಕಾತಿ ಅರ್ಜಿ ಸಲ್ಲಿಸುವವರು ವೆಬ್‌ಸೈಟ್ www.schooleducation.karnataka. gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನಲೈನ್ ಅರ್ಜಿಯೊಂದಿಗೆ ಭೌತಿಕವಾಗಿ ಪ್ರಸ್ತಾವನೆಯನ್ನು ಸಂಬಂಧಿಸಿದ ಕಛೇರಿ ಮುಖ್ಯಸ್ಥರ ಮೂಲಕ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Comments are closed.