ಡಿ.6ರಂದು ಕೊಪ್ಪಳ ತಾಲ್ಲೂಕು ಪಂಚಾಯತಿಯಲ್ಲಿ ಕೆ.ಡಿ.ಪಿ. ಸಭೆ
: ಜಿಲ್ಲೆಯ ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಡಿಸೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಿಕೊಳ್ಳುವರು. ಕೊಪ್ಪಳ ತಾಲ್ಲೂಕು ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ನವೆಂಬರ್-2024ರ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಮತ್ತು ಅನುಪಾಲನಾ ವರದಿಯೊಂದಿಗೆ ಈ ಸಭೆಗೆ ಹಾಜರಾಗಬೇಕು ಎಂದು ಕೊಪ್ಪಳ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.