ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿ- ಮೂಲ ದಾಖಲಾತಿಗಳ ಪರಿಶೀಲನೆ
೨೦೨೪-೨೫ನೇ ಸಾಲಿನ ಎಂ.ಎ. ಕನ್ನಡ, ಇಂಗ್ಲೀ?, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾಂ. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ ಪ್ರವೇಶಾತಿಯನ್ನು UUಅಒS (<hಣಣಠಿs://uuಛಿms.ಞಚಿಡಿಟಿಚಿಣಚಿಞಚಿ.gov.iಟಿ/>) ತಂತ್ರಾಂಶದ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
೨೦೨೪-೨೫ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿ ಅರ್ಜಿಗಳನ್ನು ಸಲ್ಲಿಸಿದ ವಿದ್ಯಾರ್ಥಿಗಳು ದಿನಾಂಕ: ೦೨.೧೨.೨೦೨೪ ರಿಂದ ೦೫.೧೨.೨೦೨೪ ರ ಒಳಗಾಗಿ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕೆಂದು ಈ ಮೂಲಕ ತಿಳಿಸಲಾಗಿದೆ. ಅರ್ಜಿದಾರರು ಸಂಬಂಧಪಟ್ಟ ಮೂಲ ದಾಖಲಾತಿಗಳನ್ನು ಪರಿಶೀಲನೆ ಪ್ರಕ್ರಿಯೆಗೆ ಬೇಕಾಗುವ ದಾಖಲೆಗಳನ್ನು ವಿಭಾಗದ ಮುಖ್ಯಸ್ಥರುಗಳಿಗೆ/ಸಂಯೋಜನಾಧಿಕಾರಿಗಳಿಗೆ ಸಲ್ಲಿಸಬೇಕು ಮತ್ತು ವಿದ್ಯಾರ್ಥಿಗಳು ತಮಗೆ ಬೇಕಾಗುವ ಮಹಾವಿದ್ಯಾಲಯಗಳಿಗೆ ಪ್ರವೇಶಾತಿಯನ್ನು ಪಡೆದುಕೊಳ್ಳಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯ, ಕುಲಸಚಿವರು (ಆಡಳಿತ) (ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.