ಎಲೆಕ್ಟ್ರಾನಿಕ್ ಪತ್ರಿಕೋದ್ಯಮದ ವಿಷಯದಲ್ಲಿ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

Get real time updates directly on you device, subscribe now.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಎಲೆಕ್ಟ್ರಾನಿಕ್ ಪತ್ರಿಕೋದ್ಯಮದ ವಿಷಯದಲ್ಲಿ ಪ್ರಾಯೋಗಿಕ ತರಬೇತಿಗಾಗಿ ಅರ್ಜಿ ಆಹ್ವಾನಿಸಲಗಿದೆ.
ಈಗಾಗಲೇ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ  ಹಾಗೂ ಡಿಪ್ಲೋಮಾ ವ್ಯಾಸಂಗ ಪೂರ್ಣಗೊಳಿಸಿರುವ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಪತ್ರಿಕೋದ್ಯಮ ಎಲೆಕ್ಟ್ರಾನಿಕ್ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಫೀಲ್ಡ್ ಅನುಭವ ನೀಡಲು ಮಾಧ್ಯಮ ವಸತಿ ಸಹಿತ 60 ದಿನಗಳ ಕಾಲ ತರಬೇತಿ ನೀಡಲಾಗುವುದು ಮತ್ತು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಬೋವಿ ಸಮುದಾಯದ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಜಿಲ್ಲಾಡಳಿತ ಭವನ 2ನೇ ಮಹಡಿ ಹೊಸಪೇಟೆ ರಸ್ತೆ ಕೊಪ್ಪಳ ಕಛೇರಿಗೆ ಡಿಸೆಂಬರ್ 20ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!