ಕೊಪ್ಪಳ ಇನ್ನರ್ ವ್ಹೀಲ್ ಕ್ಲಬ್ ಗೆ ರಾಜ್ಯ ಪ್ರಶಸ್ತಿ ಪ್ರಧಾನ
Koppal
ವಿಕಲಚೇತನರ ಪುನಃಶ್ಚೇತನ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಕಳೆದ 29 ವರ್ಷಗಳಿಂದ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಕೊಪ್ಪಳದ ಇನ್ನರ್ ವ್ಹೀಲ್ ಕ್ಲಬ್ ಗೆ ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2024ನೇ ಸಾಲಿನ ಉತ್ತಮ ಸಂಸ್ಥೆಯ ವಿಭಾಗದಡಿ ರಾಜ್ಯ ಪ್ರಶಸ್ತಿ ಲಭಿಸಿದ್ದು, ಮಂಗಳವಾರ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಉಮಾ ಮಹೇಶ ತಂಬ್ರಳ್ಳಿ ಪ್ರಶಸ್ತಿ ಸ್ವೀಕರಿಸಿ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕ್ಲಬ್ ನ ಸಂಸ್ಥಾಪಕ ಸದಸ್ಯೆ ಡಾ//ರಾಧಾ ಕುಲಕರ್ಣಿ, ಪದಾಧಿಕಾರಿಗಳಾದ ತ್ರಿಶಾಲಾ ಪಾಟೀಲ್, ಸುಜಾತಾ ಪಟ್ಟಣಶೆಟ್ಟಿ, ವಿದ್ಯಾ ಬೆಟಗೇರಿ, ಪದ್ಮಾ ಜೈನ್, ಮಹೇಶ್ ತಂಬ್ರಳ್ಳಿ ಹಾಗೂ ಸಾಗರ್ ಜೈನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Comments are closed.