ಹನುಮಮಾಲಾ ಕಾರ್ಯಕ್ರಮ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ
ಡಿಸೆಂಬರ್ 12, 13 ರಂದು ಗಂಗಾವತಿ ನಗರದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರ ಪ್ರಕಾರ ಡಿಸೆಂಬರ್ 11 ರ ಸಂಜೆ 04 ಗಂಟೆಯಿAದ ಡಿ.13 ರ ಮಧ್ಯರಾತ್ರಿವರೆಗೆ ಗಂಗಾವತಿ ಗ್ರಾಮೀಣ ಠಾಣೆಯ ವ್ಯಾಪ್ತಿ(09 ಕಿ.ಮೀ ವ್ಯಾಪ್ತಿಗೆ) ಹಾಗೂ ಡಿ.12 ರ ಸಂಜೆ 04 ಗಂಟೆಯಿAದ ಡಿ.13 ರ ಮಧ್ಯರಾತ್ರಿವರೆಗೆ ಗಂಗಾವತಿ ನಗರ ಠಾಣಾ ವ್ಯಾಪ್ತಿಯಲ್ಲಿ ಮದ್ಯಪಾನ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Comments are closed.