ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Get real time updates directly on you device, subscribe now.

ಕೊಪ್ಪಳ  ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಡಿ 20 ರವರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್  https://ssp.postmatric.karnataka.gov.in     ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್  https://bcwd.karnataka.gov.in     ಗೆ ಭೇಟಿ ನೀಡಬಹುದು. ಹೆಚ್ಚಿನ ವಿವರಗಳಿಗಾಗಿ ಇಲಾಖಾ ಸಹಾಯವಾಣಿ, ದೂರವಾಣಿ ಸಂಖ್ಯೆ: 8050770005, ಇ-ಮೇಲ್  [email protected]     ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ  postmatrichelp@karnataka.gov.in     ಮತ್ತು ಸಹಾಯವಾಣಿ/ ದೂರವಾಣಿ ಸಂಖ್ಯೆ: 1902 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!