ಗಾಂಧಿನಗರ ಅಂಗನವಾಡಿ ಕಟ್ಟಡ ಕಾಮಗಾರಿ ಪ್ರಾರಂಭಿಸಲು ಒತ್ತಾಯ
ಕೊಪ್ಪಳ : ನಗರ ವ್ಯಾಪ್ತಿಯ ಗಾಂಧಿನಗರದ ವಾಟರ್ ಫಿಲ್ಟರ್ ಹತ್ತಿರ ಅಂಗನವಾಡಿ ಕಟ್ಟಡ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸುವಂತೆ ಒತ್ತಾಯಿಸಿ ನಗರಸಭೆಯ ಪೌರಾಯುಕ್ತ ಗಣಪತಿ ಪಾಟೀಲ್ ಅನುಪಸ್ಥಿತಿಯಲ್ಲಿ ವ್ಯವಸ್ಥಾಪಕ ಮುನಿ ಸ್ವಾಮಿ ಅವರಿಗೆ ಗಾಂಧಿನಗರದ ಸ್ಲಂ ನಿವಾಸಿಗಳು ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವರಾಜ್ ಶೀಲವಂತರ ಮತ್ತು ಕೊಳಚೆ ನಿರ್ಮೂಲನಾ ವೇದಿಕೆಯ ಜಿಲ್ಲಾ ಸಂಚಾಲಕ ಗಾಳೆಪ್ಪ ಮುಂಗೊಲಿ ಅವರ ನೇತೃತ್ವದಲ್ಲಿ ಮನವಿಯನ್ನು ಅರ್ಪಿಸಲಾಯಿತು.
ಕೆಲ ಅವಿವೇಕಿಗಳು ಸ್ಲಂ ಮಕ್ಕಳ ಕಲಿಕೆಗೆ ಸಹಕರಿಸದೆ ಕಟ್ಟಡ ಕಾಮಗಾರಿಗೆ ಅಡ್ಡಿಪಡಿಸುತ್ತಿವೆ.ಇದನ್ನು ನಗರಸಭೆಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು.ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸುವಲ್ಲಿ ವಿಳಂಬವಾದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವರಾಜ್ ಶೀಲವಂತರ, ಕೊಳಚೆ ನಿರ್ಮೂಲನಾ ವೇದಿಕೆಯ ಜಿಲ್ಲಾ ಸಂಚಾಲಕ ಗಾಳೆಪ್ಪ ಮುಂಗೊಲಿ ಮುಂತಾದವರು ಒತ್ತಾಯಿಸಿದ್ದಾರೆ.
Comments are closed.