ಮಾನವ ಸಂಪನ್ಮೂಲವಿಲ್ಲದೆ ಅಭಿವೃದ್ಧಿ ಅಸಾಧ್ಯ: ಹನುಮಂತಗೌಡ ಎಂ.ಗುಡಿಹಿಂದಿನ
ಕೊಪ್ಪಳ: ಯಾವುದೇ ಸಂಘ-ಸಂಸ್ಥೆ, ವ್ಯಾಪಾರವಾಗಲೀ ಮಾನವ ಸಂಪನ್ಮೂಲ ಇಲ್ಲದೇ ಅಭಿವೃದ್ಧಿ ಅಸಾಧ್ಯ ಎಂದು ಯಲಬುರ್ಗಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹನುಮಂತಗೌಡ ಎಂ.ಗುಡಿಹಿಂದಿನ ಅಭಿಪ್ರಾಯಪಟ್ಟರು.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದಿಂದ ಆಂತರಿಕ ಗುಣಮಟ್ಟ ಭರವಸೆ ಕೋಶದ ಆಶ್ರಯದಲ್ಲಿ ಗುರುವಾರ ನಡೆದ ಆರ್ಥಿಕಾಭಿವೃದ್ಧಿಯಲ್ಲಿ ಮಾನವ ಸಂಪನ್ಮೂಲ ನಿರ್ವಹಣೆಯ ಪಾತ್ರ ಎಂಬ ವಿಷಯ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.
ಅಭಿವೃದ್ಧಿ ವಿಷಯದಲ್ಲಿ ಮಾನವ ಸಂಪನ್ಮೂಲ ನಿರ್ವಹಣೆಯ ಪಾತ್ರ ದೊಡ್ಡದು. ಸಂಘಸಂಸ್ಥೆ, ವಾಣಿಜ್ಯ-ವ್ಯಾಪಾರದಲ್ಲಿ ಮಾನವ ಸಂಪನ್ಮೂಲದ ಕೊರತೆ ಕಂಡು ಬಂದರೆ ಅಭಿವೃದ್ಧಿಯ ಪಥ ಸುಲಭಕ್ಕೆ ಸಿಗದು ಎಂದು ಅವರು ಪ್ರತಿಪಾದಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಎಚ್.ನಾಯಕ ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕರು, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಟಿ.ವಿ.ವಾರುಣಿ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸಹಾಯಕ ಪ್ರಾಧ್ಯಾಪಕ ವೈ.ಬಿ.ಅಂಗಡಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸಂತೋಷಿಕುಮಾರಿ ಪಾಲ್ಗೊಂಡು ಮಾತನಾಡಿದರು. ಡಾ.ಗಿರಿಜಾ ತುರುಮುರಿ ನಿರೂಪಿಸಿದರು. ಅಮರೇಶ್ ಡೊಳ್ಳಿನ್ ಸ್ವಾಗತಿಸಿದರು. ಡಾ.ಜಾತಪ್ಪ.ಜೆ ಸಂಪನ್ಮೂಲ ವ್ಯಕ್ತಿ ಪರಿಚಯ ಮಾಡಿಕೊಟ್ಟರು. ಈರಪ್ಪ ಮಂಗಳಾಪುರ ವಂದಿಸಿದರು. ಡಾ.ಸಣ್ಣದೇವೇಂದ್ರಸ್ವಾಮಿ, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ಧರು.
========
ಫೋಟೋ:
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವಿಶೇಷ ಉಪನ್ಯಾಸ ಮಾಲಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಉಪನ್ಯಾಸ ನೀಡಿದ ಅರ್ಥಶಾಸ್ತ್ರ ಸಹಪ್ರಾಧ್ಯಾಪಕ ಹನುಮಂತಗೌಡ ಎಂ.ಗುಡಿಹಿಂದಿನ ಅವರನ್ನು ಗೌರವಿಸಲಾಯಿತು.
======================
Comments are closed.