ಮಕ್ಕಳ ಹಕ್ಕುಗಳ ಕುರಿತು ಹಿರೇವಂಕಲಕುAಟಾ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

Get real time updates directly on you device, subscribe now.

Child Rights
ಕೊಪ್ಪಳ,  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇವರ ಸಹಯೋಗದಲ್ಲಿ “ಮಕ್ಕಳ ಹಕ್ಕುಗಳು ಕಾಯ್ದೆಗಳು ಹಾಗೂ ಸಮಸ್ಯೆಗಳ ಕುರಿತು ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ”ವು ಶುಕ್ರವಾರದಂದು ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುAಟಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಬಳಿಕ ಮಾತನಾಡಿ, ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ಸರಕಾರವು ಒಪ್ಪಿ 11 ಡಿಸೆಂಬರ್ 1992 ಸಹಿ ಮಾಡಿರುತ್ತದೆ. 18 ವರ್ಷದೊಳಗಿನ ಎಲ್ಲಾ ಮಾನವ ಜೀವಿಗಳು ಸಹ ಮಕ್ಕಳು ಎಂದು ಪರಿಗಣಿತವಾಗಿರುತ್ತದೆ. ದೇಶದ ಸಮಸ್ತ ಮಕ್ಕಳಿಗೂ ಬದುಕುವ ಹಕ್ಕುಗಳು, ಅಭಿವೃದ್ಧಿ ಮತ್ತು ವಿಕಾಸ ಹೊಂದುವ ಹಕ್ಕುಗಳು, ಶೋಷಣೆಯ ವಿರುದ್ಧ ಸಂರಕ್ಷಣೆಯ ಹಕ್ಕುಗಳು ಹಾಗೂ ಭಾಗವಹಿಸುವ ಹಕ್ಕುಗಳನ್ನು ಅನುಭವಿಸುವಂತಹ ವಾತಾವರಣ ನಿರ್ಮಿಸಬೇಕಿದೆ ಈ ಉದ್ದೇಶಗಳ ಸಾಧನೆಗಾಗಿ ಭಾರತ ಸರಕಾರವು ಹಲವಾರು ಕಾಯ್ದೆ ಮತ್ತು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.
ಕಾಯ್ದೆ ಮತ್ತು ಯೋಜನೆಗಳ ಮೇಲ್ವಿಚಾರಣೆ ಮತ್ತು ಉಸ್ತುವಾರಿಗಾಗಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಕಾಯ್ದೆ-2005ರನ್ವಯ ರಾಷ್ಟç ಮತ್ತು ರಾಜ್ಯ ಮಟ್ಟದಲ್ಲಿ ಕ್ರಮವಾಗಿ ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳನ್ನು ರಚಿಸಿ, ಜಾರಿಯಲ್ಲಿ ತಂದಿರುತ್ತದೆ. ರಾಜ್ಯದಲ್ಲಿ ಆಯೋಗವು ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ-2009, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012, ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ಯನ್ನು ಮೇಲುಸ್ತುವಾರಿ ಮಾಡುವ ಅಧಿಕಾರವನ್ನು ಹೊಂದಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಲ್ಲಿ ಯಾರೇ ಆದರೂ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ದೂರವಾಣಿ ಸಂಖ್ಯೆ 080-22115290/92 ಅಥವಾ  www.kscpcr.karnataka.gov.in    ನಲ್ಲಿ ದೂರನ್ನು ನೀಡಬಹುದಾಗಿದೆ ರಾಜ್ಯದಲ್ಲಿ ವಿನೂತನವಾಗಿ ಮಕ್ಕಳ ಸಮಸ್ಯೆಗಳನ್ನು ಅರಿತು ಪರಿಹಾರಗಳನ್ನು ಕಂಡುಕೊಳ್ಳಲು “ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಅವರು ಮಾತನಾಡಿ, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು ಸರಕಾರವು “ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ನು ಜಾರಿಯಲ್ಲಿ ತಂದಿದೆ, ಅಲ್ಲದೇ ಈ ಕಾಯ್ದೆಗೆ 2019ರಲ್ಲಿ ತಿದ್ದುಪಡಿಯನ್ನನು ತಂದಿರುತ್ತದೆ. ಈ ಕಾಯ್ದೆಯನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ಅಪರಾಧಗಳನ್ನು ಎಸಗಿದ ವ್ಯಕ್ತಿಗೆ ಕನಿಷ್ಠ 20 ವರ್ಷದಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು ದಂಡವನ್ನು ಅಥವಾ ಮರಣ ದಂಡನೆಯನ್ನು ವಿಧಿಸಬಹುದಾಗಿದೆ. ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವು ಸಹ ಅಪರಾಧವಾಗಿದೆ. ಈ ರೀತಿಯ ಘಟನೆಗಳು ಈಗಾಗಲೇ ಜಿಲ್ಲೆಯಲ್ಲಿ ಬಹಳಷ್ಟು ವರದಿಯಾಗಿದ್ದು, ಪ್ರಕರಣಗಳು ದಾಖಲಾಗಿವೆ ಆದ್ದರಿಂದ ತಮ್ಮ ವ್ಯಾಪಿಯಲ್ಲಿ ಈ ಕುರಿತು ವ್ಯಾಪಕ ಪ್ರಚಾರವನ್ನು ನೀಡಿ ಎಂದು ತಿಳಿಸಿದರು.
ವಿದ್ಯಾಥಿಗಳೊಂದಿಗೆ ಸಂವಾದ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು, ನಮ್ಮ ಗ್ರಾಮಕ್ಕೆ ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್‌ನ್ನು ಬಿಡುವಂತೆ ವಿನಂತಿಸಿದರು, ಅದಕ್ಕೆ ವ್ಯವಸ್ಥಾಪಕರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಿಭಾಗ ಯಲಬುರ್ಗಾರವರು ಬಸ್‌ಗಳ ಸಮಯವನ್ನು ಮರು ನಿಗದಿಗೊಳಿಸಲಾಗುವುದೆಂದು ತಿಳಿಸಿದರು. ಇದೇ ಕಾಲೇಜಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ವಿದ್ಯಾರ್ಥಿಗಳು ವಿನಂತಿಸಿದರು, ಹಿರೇವಂಕಲಕುAಟಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಈಗಾಗಲೇ ಎರಡು ನೀರಿನ ಬಾಟಲಗಳನ್ನು ಪೂರೈಸುತ್ತಿದ್ದು, ಇದನ್ನು 10 ಬಾಟಲ್‌ಗೆ ಹೆಚ್ಚಿಸಲಾಗುವುದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ಹುಲಿಗೆಮ್ಮ ಬಸಪ್ಪ ರ‍್ಲಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಕಾಶ ಕಡಗದ, ಯಲಬುರ್ಗಾ ಶಿಶು ಅಭಿವೃದ್ದಿ ಯೋಜನಾಧಿಕಾರಿ ಬೆಟದಪ್ಪ ಮಾಳೇಕೊಪ್ಪ, ಶಶಿಧರ ಸಕ್ರಿ, ರಮೇಶ ಜೀಣಗಿ, ನಿವೇದಿತಾ ಡಿ, ಮಹಾಂತೇಶ ತಮ್ಮಣ್ಣವರು, ರವಿ ಢಣಾಪುರ, ಅಮರೇಶ ಹಿರೇಮಠ, ಹನುಮೇಶ ಕುರಿ, ಶಿವಲೀಲಾ ವನ್ನೂರು ಸೇರಿದಂತೆ ಇತರರು ಇದ್ದರು.
ರವಿಕುಮಾರ ಪವಾರ ಕಾರ್ಯಕ್ರಮವನ್ನು ಸ್ವಾಗತಿಸಿದರು, ಪ್ರತಿಭಾ ಕಾಶಿಮಠ ನಿರೂಪಿಸಿದರು ರವಿಕುಮಾರ ಬಡಿಗೇರ ವಂದಿಸಿದರು.

Get real time updates directly on you device, subscribe now.

Comments are closed.

error: Content is protected !!