ಜನಪರ ಯೋಜನೆಗಳು ಸಾರ್ವಜನಿಕರಿಗೆ ತಲುಪವಂತಾಗಬೇಕು- ಹಿಟ್ನಾಳ್

Get real time updates directly on you device, subscribe now.

ತ್ರೈಮಾಸಿಕ ಕೆ.ಡಿ.ಪಿ. ಸಭೆ
Koppal :  ಸರ್ಕಾರದಿಂದ ಅನೇಕ ಜನಪರ ಯೋಜನೆಗಳನ್ನೂ ಜಾರಿ ಗೊಳಿಸಲಾಗಿದೆ ಅವೆಲ್ಲ ಯೋಜನೆಗಳು ಸಾರ್ವಜನಿಕರಿಗೆ ತಲುಪವಂತಾಗಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.

ಇಂದು ಕೊಪ್ಪಳದ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಜರುಗಿದ 2024-25ನೇ ಸಾಲಿನ 2ನೇ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರ.

ಆ ನಿಟ್ಟಿನಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ ಯೋಜನೆಗಳ ಬಗ್ಗೆ ಜನರಿಗೆ ಸಮರ್ಪಕವಾದ ಮಾಹಿತಿ ನೀಡಿ,ಅಧಿಕಾರಿಗಳು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಸಮಯ ನಿಗದಿ ಪಡಿಸಿ ಜನರು ತಮ್ಮನ್ನು ಭೇಟಿಯಾಗಲು ಕಚೇರಿಗೆ ಬಂದ ವೇಳೆಯಲ್ಲಿ ಅವರೊಂದಿಗೆ ಉತ್ತಮ ವಿನಯದಿಂದ ನಡೆದುಕೊಂಡು ತಮ್ಮ ತಮ್ಮ ಇಲಾಖೆಗಳಿಗೆ ಸಂಭಂದ ಪಟ್ಟ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಸಾರ್ವಜನಿಕರಿಗೆ ಆಡಳಿತ ವ್ಯವಸ್ಥೆ ಮೇಲೆ ನಂಬಿಕೆ ಬರುವಂತೆ ನಡೆದುಕೊಳ್ಳಿ ಸೂಚಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಾಗೂ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಯಿತು.

ಸಭೆಯಲ್ಲಿ ಉಪ ವಿಭಾಗಧಿಕಾರಿ ಮಹೇಶ್ ಮಾಲಗಿತ್ತಿ, ಜಿ. ಪಂ ಯೋಜನಾ ನಿರ್ದೇಶಕರಾದ ಪ್ರಕಾಶ್ ವಡ್ಡರ, ತಾಲೂಕ ಪಂಚಾಯತ್ ಇಓ ದುಂಡೇಶ್ ತುರಾದಿ, ತಹಸೀಲ್ದಾರ್ ವಿಠ್ಠಲ್ ಚೌಗಲೇ, ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಾಲಚಂದ್ರನ್ ಮುನಿರಬಾದ್ ಸೇರಿದಂತೆ ತಾಲೂಕ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!