ಹನುಮಮಾ‌ಲ ಕಾರ್ಯಕ್ರಮ ಕಳೆದ ವರ್ಷದಂತೆ ಈ ವರ್ಷ ಸುಸೂತ್ರವಾಗಿ ನಡೆಸಿ- ಸಚಿವ ಶಿವರಾಜ ತಂಗಡಗಿ

Get real time updates directly on you device, subscribe now.

ಕೊಪ್ಪಳ. ):- ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಕಳೆದ ವರ್ಷ ಚೆನ್ನಾಗಿ ನಡೆಯಿತು ಎಂದು ಸಾರ್ವಜನಿಕರು ತಿಳಿಸಿದರು ಅದರಂತೆ ಈ ವರ್ಷವು ಯಾವುದೇ ಸಮಸ್ಯೆಗಳಾಗದಂತೆ ಸುಸೂತ್ರವಾಗಿ ನಡೆಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ‌ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಹೇಳಿದರು.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಡಿಸೆಂಬರ್. 12 ಮತ್ತು 13 ರಂದು ನಡೆಯಲಿರುವ ಹನುಮಮಾಲ ವಿಸರ್ಜನೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಹನುಮಮಾಲ ಕಾರ್ಯಕ್ರಮದಲ್ಲಿ ಯಾವುದೇ ಸಮಸ್ಯೆಗಳಾಗದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು. ಈ ಸಮಿತಿಯ ನೋಡಲ್ ಅಧಿಕಾರಿಗಳು ಖುದ್ದಾಗಿ ಹಾಜರಿದ್ದು ತಮಗೆ ವಹಿಸಿದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಬೇಕು. ಪೊಲೀಸರು 4 ರಿಂದ 5 ಕಡೆ ಚೆಕಪೋಸ್ಟಗಳನ್ನು ತೆರೆಯಬೇಕು. ಜನರು ಬರುವುದು ಒಂದು ಕಡೆ ಮತ್ತು ಹೋಗುವುದಕ್ಕೆ ಇನ್ನೊಂದು ಕಡೆ ಮಾರ್ಗಗಳನ್ನು ಮಾಡಿ ಟ್ರಾಫಿಕ್ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕೆಂದರು.

ಕಳೆದ ಸಲಕ್ಕಿಂತ ಈ ಸಲ ಹೆಚ್ಚು ಜನರು ಬರುತ್ತಾರೆ ಹಾಗಾಗಿ ಬರುವ ಜನರಿಗೆ ಊಟದ ಸಮಸ್ಯೆಯಾಗಬಾರದು ಮತ್ತು ಒಳ್ಳೆಯ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ನದಿಯಲ್ಲಿ ಸ್ನಾನಮಾಡಿ ಜನ ಬಟ್ಟೆಗಳನ್ನು ಅಲ್ಲಿ ಬಿಟ್ಟು ಹೋಗುತ್ತಾರೆ. ಅವುಗಳನ್ನು ಒಂದು ಕಡೆ ತೆಗೆದು ಹಾಕಬೇಕುವ ವ್ಯವಸ್ಥೆಯಾಗಬೇಕು. ಎಲ್ಲರೂ ಸ್ನಾನಕ್ಕೆ ‌ಅನುಕೂಲವಾಗುವ ರೀತಿಯಲ್ಲಿ ಹೆಚ್ಚಿನ ನೀರಿನ ಟ್ಯಾಪಗಳನ್ನು ಅಳವಡಿಸಿ ಎಂದು ಹೇಳಿದರು.

ಆರೋಗ್ಯ ಸಮಿತಿ. ಸ್ವಚ್ಚತೆ. ಬ್ಯಾರಿಕೇಡ್. ಸಾರಿಗೆ. ರಸ್ತೆ ನಿರ್ವಹಣಾ. ಆಹಾರ. ಅರಣ್ಯ ಸಮಿತಿ ಸೇರಿದಂತೆ ಇತರೆ ಸಮಿತಿಯವರು ತಮ್ಮ ಕೆಲಸಗಳನ್ನು ಜವಾಬ್ದಾರಿಯಿಂದ ಮಾಡಿ. ಅಂಜನಾದ್ರಿ ಪಕ್ಕದಲ್ಲಿಯ ಅರಣ್ಯದಲ್ಲಿ ಚಿರತೆ ಮತ್ತು ಕರಡಿ ಹಾವಳಿ ಜಾಸ್ತಿ ಇದೆ. ಹಾಗಾಗಿ ಯಾವುದೇ ಅನಾಹುತಗಳಾಗದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿಗಸ್ತು ತಿರುಗಬೇಕು.

ಶಿಷ್ಟಾಚಾರ ಪಾಲನೆ ಸಮಿತಿಯರು ಯಾರೇ ಶಾಸಕರು ಹಾಗೂ ‌ಸಚಿವರು ಬಂದಾಗ ಶಿಷ್ಟಾಚಾರ ನಿಯಮ ಪಾಲನೆ ಮಾಡಬೇಕು. ಹಲವಾರು ಜನರು ‌ಬರುವದರಿಂದ ಸ್ವಚ್ಚತೆ ನಿರ್ವಹಣೆ ಮಾಡಬೇಕು. ಅಂಜನಾದ್ರಿ ಸುತ್ತಲಿನ ಪ್ರದೇಶದಲ್ಲಿ ಮದ್ಯಪಾನ ನಿಷೇಧ ಮಾಡಬೇಕು. ಇತರೆ ವಿವಿಧ ಇಲಾಖೆಗಳಿಗಿಂತ ಪೊಲೀಸ್ ಹಾಗೂ ರೆವಿನ್ಯೂ ಇಲಾಖೆಯ ಜವಾಬ್ದಾರಿ ಬಹಳ ಇದೆ ಎಂದು ಹೇಳಿದರು.

ಸಭೆಯಲ್ಲಿ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಕೊಪ್ಪಳ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ ಕುಮಾರ್, ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!