ಹನುಮ ಮಾಲಾ ಅಭಿಯಾನ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕ ಗಾಲಿ ಜನಾರ್ಧನ ರೆಡ್ಡಿ ಸೂಚನೆ
ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹನುಮ ಮಾಲಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ಪಾಲ್ಗೊಂಡು ಮಾತನಾಡಿದರು.
ಪ್ರತಿ ವರ್ಷದಂತೆ ಜರುಗುವ ಹನುಮ ಮಾಲಾ ಅಭಿಯಾನದ ಅಂಗವಾಗಿ ಇದೇ ತಿಂಗಳು 13ರಂದು ಗಂಗಾವತಿ ತಾಲೂಕಿನ ಕಿಷ್ಕಿಂದ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಹನುಮ ಮಾಲಾಧಾರಿಗಳ ಮಾಲಾ ವಿಸರ್ಜನಾ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಲು ಮೂಲಭೂತ ಸೌಕರ್ಯಗಳು ಸೇರಿ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಂದುಗಳ ಪವಿತ್ರ ಕ್ಷೇತ್ರವಾದ ಕಿಷ್ಕಿಂದ ಅಂಜನಾದ್ರಿ ಬೆಟ್ಟಕ್ಕೆ ನಾಡಿನ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಮಾಲಾ ವಿಸರ್ಜನೆಗಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಊಟ ಉಪಹಾರ ಸೇರಿದಂತೆ ಸಂಚಾರದಟ್ಟಣೆ, ಜನದಟ್ಟಣೆ ನಿಯಂತ್ರಿಸಲು ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲು, ನಾಡಿನ ವಿವಿಧ ಜಿಲ್ಲೆಗಳಿಂದ ವಾಹನಗಳಲ್ಲಿ ಆಗಮಿಸುವ ಭಕ್ತಾದಿಗಳಿಗೆ ಪಾರ್ಕಿಂಗ್ ವ್ಯವಸ್ಥೆ, ರಾತ್ರಿ ವೇಳೆ ವಿದ್ಯುತ್ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ, ಸ್ನಾನ ಘಟ್ಟಗಳನ್ನು ನಿರ್ಮಿಸಬೇಕು ಹಾಗೂ ಅನ್ನಪ್ರಸಾದಕ್ಕಾಗಿ ಬೆಟ್ಟದ ಎಡ ಭಾಗದಲ್ಲಿ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ವ್ಯವಸ್ಥೆ ಮಾಡವ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್, ಅಪರ ಜಿಲ್ಲಾಧಿಕಾರಿಗಳಾದ ಸಿದ್ದರಾಮೇಶ್ವರ, ಸಿ.ಇ.ಓ ರಾಹುಲ್ ರತ್ನಂ ಪಾಂಡೆ, ಡಿ.ವೈ.ಎ.ಸ್ಪಿ ಸಿದ್ದನಗೌಡ ಪೊಲೀಸ್ ಪಾಟೀಲ್, ಕೊಪ್ಪಳ ಎಸ್.ಪಿ ರಾಮ್ ಎಲ್ ಅರಸಿದ್ದಿ, ಪೌರಾಯುಕ್ತರಾದ ವಿರೂಪಾಕ್ಷಮೂರ್ತಿ, ಇ.ಓ ಲಕ್ಷ್ಮೀದೇವಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.