ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯಬಾರದು- ಸಚಿವ ಶಿವರಾಜ ತಂಗಡಗಿ
ಕೊಪ್ಪಳ ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯಬಾರದು ಎಂಬ ಉದ್ದೇಶದಿಂದ ಇಂದು ಜಿಲ್ಲೆಯ ವಿವಿಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಖಂಡರು ಹಾಗೂ ಸಂಬAಧಿಸಿದ ಅಧಿಕಾರಿಗಳ ಸಭೆ ಕರೆದಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಹೇಳಿದರು.
ಅವರು ಭಾನುವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಗಟ್ಟುವ ಕುರಿತು ದಲಿತ ಮುಖಂಡರು, ಕಂದಾಯ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳು 2021 ರಲ್ಲಿ 50, 2022 ರಲ್ಲಿ 64, 2023 ರಲ್ಲಿ 41 ಹಾಗೂ 2024ರ ಡಿಸೆಂಬರ್ ವರೆಗೆ 61 ಪ್ರಕರಣಗಳು ವರದಿಯಾಗಿವೆ. ಎಸ್.ಸಿ. ಹಾಗೂ ಎಸ್.ಟಿ ಜನಾಂಗದವರ ಮೇಲಾಗುವ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ಅವಶ್ಯಕತೆಯಿದೆ. ಜಿಲ್ಲೆಯ ವಿವಿಧ ಸಂಘಟನೆಗಳು ಸಭೆ ಮಾಡುವಂತೆ ನನಗೆ ಕೇಳಿಕೊಂಡಿದ್ದರು. ಹಾಗಾಗಿ ಇಂದು ದೌರ್ಜನ್ಯ ಪ್ರಕರಣಗಳನ್ನು ತಡೆಯಲು ದಲಿತ ಮುಖಂಡರ ಅಭಿಪ್ರಾಯಗಳನ್ನು ಪಡೆಯಲು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಈ ಸಭೆಯನ್ನು ನಡೆಸಿದ್ದೇನೆ. ತಾವು ನೀಡುವ ಸಲಹೆಗಳಿಂದ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಅನುಕೂಲವಾಗುತ್ತದೆ ಎಂದರು.
ದಲಿತರ ಮೇಲೆ ಯಾವುದೇ ರೀತಿಯ ದೌರ್ಜನ್ಯ ಆಗಬಾರದು. ದೌರ್ಜನ್ಯ ಪ್ರಕರಣಗಳಲ್ಲಿ ಕೊಲೆಗಳು ನಡೆಯುತ್ತಿರುವುದು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ದೌರ್ಜನ್ಯಗಳು ನಡೆಯದಂತೆ ಗ್ರಾಮ ಮಟ್ಟದಿಂದ ಜಾಗೃತಿ ಮೂಡಿಸುವ ಅಗತ್ಯವಿದೆ. ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ಪ್ರತಿ ತಿಂಗಳು 2ನೇ ರವಿವಾರದಂದು ಒಂದು ಗ್ರಾಮ ಪಂಚಾಯತ್ ಅಥವಾ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಎಲ್ಲಾ ಸಮುದಾಯದವರನ್ನು ಕರೆದು ಸಭೆ ನಡೆಸಬೇಕು. ಎಸ್ಸಿ, ಎಸ್ಟಿ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ವಿನಃ ಕಾರಣ ವಿಳಂಭ ಮಾಡಬಾರದು. ಒಂದು ವೇಳೆ ವಿಳಂಭ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷ್ಯಣೀಯ ಕ್ರಮ ಕೈಗೊಳ್ಳಲಾಗುವದು ಎಂದು ಹೇಳಿದರು.
ಅಸ್ಪೃಶ್ಯತೆ ಆಚರಣೆ ಮಾಡದಂತೆ ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿ ಹೇಳಬೇಕು. ಸ್ವಾತಂತ್ರ್ಯ ಸಿಕ್ಕು 70 ವರ್ಷಗಳ ಮೇಲಾಗಿದ್ದರೂ ಇನ್ನೂ ಅಸ್ಪೃಶ್ಯತೆ ಜಾರಿಯಲ್ಲಿರುವುದು ವಿಷಾದನೀಯ ಸಂಗತಿಯಾಗಿದೆ. ನಾವೆಲ್ಲರೂ ಒಂದೆ ಎನ್ನುವ ಭಾವನೆ ಜನರಲ್ಲಿ ಬರಬೇಕು. ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.
ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಆಯಾ ಗ್ರಾಮದ ಎಲ್ಲಾ ಸಮಾಜದ ಮುಖಂಡರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳ ಶಾಂತಿ ಸಭೆ ನಡೆಸುವುದರ ಜೊತೆಗೆ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ. ಆಯಾ ಗ್ರಾಮದ ಮುಖಂಡರಿಗೆ ಅಲ್ಲಿಯ ಸಮಸ್ಯೆಗಳ ಗಮನಕ್ಕೆ ಬಂದಾಗ ಮುಂದೆ ಯಾವುದೇ ಅನಾಹುತಗಳು ಸಂಭವಿಸದಂತೆ ಮುಂಜಾಗೃತೆ ವಹಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮಾಜದ ಮುಖಂಡರು ಜಿಲ್ಲೆಯಲ್ಲಿ ನಡೆದ ದೌರ್ಜನ್ಯ ಪ್ರಕರಣಗಳ ಮಾಹಿತಿಯನ್ನು ಸಚಿವರ ಗಮನಕ್ಕೆ ತರುವುದರ ಜೊತೆಗೆ ಅವುಗಳ ತಡೆಗೆ ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಎಲ್ಲರ ಸಲಹೆ ಮತ್ತು ಸೂಚನೆಗಳನ್ನು ಆಲಿಸಿದ ಸಚಿವರು ಇಂತಹ ಪ್ರಕರಣಗಳು ಮುಂದೆ ಜಿಲ್ಲೆಯಲ್ಲಿ ನಡೆಯದಂತೆ ಸಂಬಂಧಿಸಿದ ಅಧಿಕಾರಿಗಳು ಮುಂಜಾಗೃತಿ ವಹಿಸಬೇಕು ಎಂದು ಹೇಳಿದರು.
ಈ ಸಭೆಯನ್ನು ಸಂವಿಧಾನದ ಪಿಠಿಕೆಯನ್ನು ಓದುವ ಮೂಲಕ ಆರಂಭಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ ಕುಮಾರ್, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಗಂಗಾವತಿ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ತಹಶೀಲ್ದಾರರು, ಪೊಲೀಸ್ ಠಾಣೆಗಳ ಸಿ.ಪಿ.ಐ.ಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.