ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಚಿವ ತಂಗಡಗಿ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರ ಅಗಲಿಕೆ ತೀವ್ರ ನೋವು ತರಿಸಿದ್ದು, ದೇಶ ಒಬ್ಬ ಧೀಮಂತ ನಾಯಕನನ್ನು ನಾವು ಕಳೆದುಕೊಂಡಿದೆ.
ರಾಜ್ಯದ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ, ಸ್ಪೀಕರ್ ಆಗಿ, ಕೇಂದ್ರ ಸಚಿವರಾಗಿ ಹಾಗೂ ರಾಜ್ಯಪಾಲರಾಗಿ ಎಸ್.ಎಂ.ಕೃಷ್ಣ ಅವರು ನೀಡಿರುವ ಕೊಡುಗೆ ಅಪಾರವಾದದ್ದು. ಕರ್ನಾಟಕ ಅಭಿವೃದ್ಧಿಯ ವಿಚಾರದಲ್ಲಿ ಎಸ್.ಎಂ.ಕೃಷ್ಣ ಅವರು ತಮ್ಮದೇ ಆದ ದೂರದೃಷ್ಟಿಯನ್ನು ಹೊಂದಿದ್ದರು. ಬೆಂಗಳೂರಿನ ಅಭಿವೃದ್ಧಿಯಲ್ಲಿ ಮಹತ್ತರ ಕೊಡುಗೆ ನೀಡಿದ್ದ ಎಸ್.ಎಂ.ಕೃಷ್ಣ ಅವರಿಂದಲೇ ಬೆಂಗಳೂರಿಗೆ ವಿಶ್ವಮಟ್ಟದಲ್ಲಿ ಸಿಲಿಕಾನ್ ಸಿಟಿ, ಐಟಿ- ಬಿಟಿ ಸಿಟಿ ಎಂಬ ಹೆಸರು ಬಂದಿತ್ತು. ತಮ್ಮ ಅನನ್ಯವಾದ ಕೊಡುಗೆಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ಬದುಕು ಎಲ್ಲರಿಗೂ ಸ್ಪೂರ್ತಿ.
ಹಿರಿಯ ಮುತ್ಸದ್ದಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದು, ಕರ್ನಾಟಕಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಬಂಧು ಬಳಗಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವರು ಸಂತಾಪದಲ್ಲಿ ಹೇಳಿದ್ದಾರೆ.