ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ: ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಶೋಕಾಚರಣೆ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಮಂಗಳವಾರದAದು ಶೋಕಾಚರಣೆಯನ್ನು ಮಾಡಲಾಯಿತು.![]()

ಕನ್ನಡಿಗರ ರಾಜಧಾನಿ ಬೆಂಗಳೂರಿಗೆ ‘ಐಟಿ’ ತವರು ಎಂಬ ಬಿರುದು ಸಿಗಲು ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ನಮ್ಮನ್ನೆಲ್ಲಾ ಬಿಟ್ಟು ಅಗಲಿದ್ದಾರೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ಆಧುನಿಕ ಕಾಲ ಘಟ್ಟದಲ್ಲಿ ಜಗತ್ತಿನ ಮೂಲೆ ಮೂಲೆಗೂ ಹಬ್ಬಿಸಿದ್ದ ಕೀರ್ತಿ, ಹೆಮ್ಮೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಸಲ್ಲಬೇಕಿದೆ ಎಂದು ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ ಸಂತಾಪ ವ್ಯಕ್ತಪಡಿಸಿರುವ.
ಕರ್ನಾಟಕದ ಸಿಎಂ ಆಗಿ, ಕರ್ನಾಟಕ ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿ ಜಾಗತಿಕ ಮಟ್ಟದಲ್ಲಿ, ಕನ್ನಡ ನಾಡು ಗುರುತಿಸಿಕೊಳ್ಳಲು ಕೊಡುಗೆ ನೀಡಿದ ಎಸ್.ಎಂ. ಕೃಷ್ಣ ಅವರು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದು, ಕನ್ನಡ ನಾಡಿನ ಕೋಟಿ ಕೋಟಿ ಅಭಿಮಾನಿಗಳನ್ನ ಕೂಡ ಅಗಲಿ ಹೋಗಿದ್ದಾರೆ ಎಂದು ಸಹಾಯಕ ಪ್ರಾಧ್ಯಾಪಕರಾದ ಚಾಂದ್ ಬಾಷಾ ಸಂತಾಪ ಸೂಚಿಸಿದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ ಯಳವಟ್ಟಿ ಮತ್ತು ಪ್ರವೀಣ ಪೊಲೀಸ್ ಪಾಟೀಲ್, ಜಗದೀಶ್, ಕುಮಾರ ನಾಯಕ್, ಅಯ್ಯಪ್ಪ, ಸಂತೋಷ ಕುಮಾರ, ಪಾರ್ವತಿ, ಬಾಷಾ ವಿರೂಪಾಕ್ಷ, ಪಾಪಣ್ಣ, ಶ್ರೀಕಂತ್, ಸುಧಾಕರ್,ಗೀತಾ ಪಾಟೀಲ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Comments are closed.