ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಡಿ. 14ಕ್ಕೆ ಮುಂದೂಡಿಕೆ

0

Get real time updates directly on you device, subscribe now.

: ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ನೆಹರು ಯುವ ಕೇಂದ್ರ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಡಿ.11ರಂದು ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಡಿ. 14ಕ್ಕೆ ಮುಂದೂಡಲಾಗಿದೆ.
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ಕೇಂದ್ರ ಸಚಿವರಾರ ಎಸ್.ಎಂ.ಕೃಷ್ಣ ರವರು ನಿಧನರಾಗಿದ್ದು, ದಿವಂಗತರ ಗೌರವಾರ್ಥವಾಗಿ ಸರ್ಕಾರವು ಡಿ. 11ರ ಬುಧವಾರದಂದು ಸಾರ್ವತ್ರಿಕ ರಜೆ ಘೋಷಿಸಲಾಗಿರುವುದರಿಂದ ಮತ್ತು 3 ದಿನಗಳ ಕಾಲ ಶೋಕಾಚರಣೆ ನಿಮಿತ್ಯ ಜಿಲ್ಲಾ ಮಟ್ಟದ ವಿಜ್ಞಾನ ಮೇಳವನ್ನು ಡಿ. 14ರಂದು ನಡೆಸಲಾಗುವುದು ಎಂದು ಕೊಪ್ಪಳ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಾಂಟು ಪಾತರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!