ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿ ಮತ್ತು ಕೊಪ್ಪಳ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ.
ಎ ಐ ಯು ಟಿ ಯು ಸಿ ಗೆ ಸಂಯೋಜಿತಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು.
ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ಲಿಂಗರಾಜು ಅವರಿಗೆ ಮನವಿ ಸಲ್ಲಿಸಿ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ
ಶರಣು ಗಡ್ಡಿ ಮಾತನಾಡಿ ಆಶಾ ಕಾರ್ಯಕರ್ತೆಯರು ಹಗಲಿರುಳು ಬಡಜನರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಿ ಕೊಡಲು ಆರೋಗ್ಯ ಇಲಾಖೆಯಲ್ಲಿ ಪರಿಶ್ರಮಿಸುತ್ತಿರುವುದು ನಿಮಗೆ ತಿಳಿದಿದೆ. ರಾಜ್ಯದಲ್ಲಿ ಸರಿ ಸುಮಾರು 42,000 ಆಶಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸಿ ಸಮಗ್ರ ಅಭಿವೃದ್ಧಿಯ ಕುರಿತು ಸಮಾಜದ ಆರೋಗ್ಯಕರ ಬದಲಾವಣೆಗೆ ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ. ಹಾಗೆಯೇ ಕೋವಿಡ್-19 ಸಂದರ್ಭದಲ್ಲಿ ಈ ಫ್ರಂಟ್ ಲೈನ್ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆಯಿಂದ ಹಿಡಿದು ಎಲ್ಲರೂ ಶ್ಲಾಘಿಸಿದ್ದಾರೆ.
ಈ ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಛೇದಿತರನ್ನು ‘ಆಶಾ’ಗಳನ್ನಾಗಿ ನೇಮಕ ಮಾಡಿಕೊಂಡು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲಾಗುತ್ತದೆ ಎಂಬುದು ಸರ್ಕಾರದ ಘೋಷಣೆ. ಆದರೆ ಅಶಾಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕುತ್ತಿಲ್ಲವೆಂಬುದು ವಾಸ್ತವ. ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟಲ್‌ನಲ್ಲಿ ಆನ್ಸೆನ್ ದಾಖಲು ಮಾಡಬೇಕಿದ್ದು, ಆಶಾಗಳು ಮಾಡಿದ ಕೆಲಸಗಳು ದಾಖಲಾಗದೆ ಕಳೆದ 8 ವರ್ಷಗಳಿಂದ ಮಾಡಿದ ಕೆಲಸಕ್ಕೆ ಪ್ರೋತ್ಸಾಹಧನ ಸಿಗುತ್ತಿಲ್ಲ. ಹಲವಾರು ಸಮಸ್ಯೆಯಿಂದ ಆಶಾ ಕಾರ್ಯಕರ್ತೆಯರಿಗೆ ಬಹು ದೊಡ್ಡ ಪ್ರಮಾಣದ ಅನ್ಯಾಯ ಆಗುತ್ತಿದೆ’ ಸಮಸ್ಯೆಗಳ ಕುರಿತು ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಕಳೆದ 8 ವರ್ಷಗಳಿಂದ ಲೆಕ್ಕವಿಲ್ಲದಷ್ಟು ದೂರುಗಳನ್ನು ಸಲ್ಲಿಸಲಾಗಿದೆ. ಲೆಕ್ಕವಿಲ್ಲದಷ್ಟು ಸಭೆಗಳು, ಚರ್ಚೆಗಳು, ನಡೆದಿವೆ. ಇಲಾಖೆಯಿಂದ ಮತ್ತು ಸರ್ಕಾರದಿಂದ ಕೈಗೊಂಡ ಯಾವುದೇ ಕ್ರಮದಿಂದ ಸಮಸ್ಯೆ ಪರಿಹಾರವಾಗದೇ ಹಾಗೆಯೇ ಉಳಿದಿವೆ. ಅದರಿಂದಾಗಿ ಪ್ರತಿಯೊಬ್ಬ ಆಶಾ ಸಾವಿರಾರು ರೂ. ಆರ್ಥಿಕ ನಷ್ಟ ಅನುಭವಿಸಿರುವರು.
ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸಲು, ರಾಜ್ಯ ಸರ್ಕಾರ ಈಗ ನೀಡುತ್ತಿರುವ ರೂ.5000 ಮಾಸಿಕ ನಿಶ್ಚಿತ ಗೌರವಧನ ಮತ್ತು ವಿವಿಧ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ.7000 ಪ್ರೋತ್ಸಾಹಧನ ಹಾಗೂ ರಾಜ್ಯ ಸರ್ಕಾರದ ಪ್ರತಿಷ್ಠೆಯ ಐದು ಗ್ಯಾರಂಟಿಗಳ ಜೊತೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆಯ ನೀಡಿರುವ ರೂ. 3000 ಗಳನ್ನು ಒಟ್ಟುಗೂಡಿಸಿ ಮಾಸಿಕ ರೂ.15,000 ಗೌರವಧನ ನಿಗದಿ ಮಾಡಬೇಕು ಮತ್ತು ಇತರ 4 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, 13-14 ಫೆಬ್ರವರಿ 2024 ರಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಅನಿರ್ಧಿಷ್ಟ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಹೋರಾಟದ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು, “ನನ್ನನ್ನು ನಂಬಿ, ಹೋರಾಟ ಹಿಂತೆಗೆದುಕೊಳ್ಳಿ, ಮುಂದಿನ ಕೆಲವೇ ದಿನಗಳಲ್ಲಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದರು, ಅದೇ ರೀತಿ ಸನ್ಮಾನ್ಯ ಉಪ ಮುಖ್ಯಮಂತ್ರಿಗಳೂ “ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದರು” ನಂತರದ ದಿನಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಇಲಾಖೆಯ ಸಚಿವರು, ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಹಾಗಾಗಿ ಮುಂದಿನ ಹಂತದ ಹೋರಾಟವನ್ನು ಜನವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನ ಉದ್ದೇಶಿಸಿ ಮಾತನಾಡಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಕೌಶಲ್ಯ ದೊಡ್ಡ ಗೌಡರ ನಿರೂಪಣೆ ಮಾಡಿದರು. ಗೌರವ ಅಧ್ಯಕ್ಷರಾದ ಶೋಭಾ ಹೂಗಾರ್, ಯಲಬುರ್ಗಾ ತಾಲೂಕ ಅಧ್ಯಕ್ಷರಾದ ಕಾರ್ಯದರ್ಶಿಗಳಾಶಂಕ್ರಮ್ಮ ಹಳ್ಳಿಕೇರಿ ಶಿವಮ್ಮ, ಅನ್ನಪೂರ್ಣ,ಗಂಗಾವತಿ ನಗರ ಘಟಕ ಅಧ್ಯಕ್ಷರಾದ ಕಾರ್ಯದರ್ಶಿಗಳಾದ ವಿಜಯಲಕ್ಷ್ಮಿ, ಲಾಲ್ ಬಿ,ಕೊಪ್ಪಳ ತಾಲ್ಲೂಕು ಅಧ್ಯಕ್ಷರಾದ ಸುನ್ನಿತಾ, ಮುಖಂಡರುಗಳಾದ ಮಹಾದೇವಿ, ಶಭಾನ, ಅನ್ನಪೂರ್ಣ, ರೇಖಾ ಭಾಗ್ಯಶ್ರೀ,ಅಮರಮ್ಮ, ತಿಪ್ಪಮ್ಮ, ಗೀತಾ ಮಂಜುಳಾ ಅಂಜಿನಮ್ಮ, ರೇಣುಕಾ, ರಾಜೇಶ್ವರಿ, ಲಕ್ಷ್ಮಿ ಮುಂತಾದ 500ಕ್ಕೂ ಹೆಚ್ಚು ಜನ ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.