ಹಲಗೇರಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಹಲಗೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಗಸ್ಟ್ 03ರಂದು “ವಿಶ್ವ ಸ್ತನ್ಯಪಾನ ಸಪ್ತಾಹ” ಕಾರ್ಯಕ್ರಮ ನಡೆಯಿತು.
“ದುಡಿಮೆಯಲ್ಲಿರುವ ಪಾಲಕರಿಗೆ ಸ್ತನ್ಯಪಾನದಲ್ಲಿ ಸಕ್ರಿಯಗೊಳಿಸಲು ಬದಲಾವಣೆಯನ್ನುಂಟುಮಾಡುವುದು” ಎಂಬ ಘೋಷವಾಕ್ಯದೊಂದಿಗೆ ಈ ವರ್ಷ “ವಿಶ್ವ ಸ್ತನ್ಯಪಾನ ಸಪ್ತಾಹ” ಕಾರ್ಯಕ್ರಮ ಆಚರಿಸಲಾಗುತ್ತದೆ. ಶಿಶು ಸಂಪೂರ್ಣವಾಗಿ ವಿಕಾಸ ಹೊಂದಿ, ನ್ಯೂಮೋನಿಯಾ, ಅತಿಸಾರಭೇದಿ, ಅಪೌಷ್ಟಿಕತೆ ಇತ್ಯಾದಿ ತೊಂದೆಗಳಿಂದ ಮಗುವನ್ನು ರಕ್ಷೀಸಲು ಹುಟ್ಟಿದ ಅರ್ಧ ಗಂಟೆಯೊಳಗೆ ಹಾಗೂ 06 ತಿಂಗಳವರೆಗೆ ಕೇವಲ ತಾಯಿ ಎದೆಹಾಲು ಕುಡಿಸುವುದರಿಂದ ಮಾತ್ರ ಶಿಶು ದೈಹಿಕವಾಗಿ ಮತ್ತು ಮಾನಸಿಕವಾಗಿ ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಹೆರಿಗೆಯಾದ ಮೊದಲ 03 ದಿನದಲ್ಲಿ ಬರುವ ಹಾಲಿನಲ್ಲಿ ಕೋಲಾಸ್ಟ್ರಂ ಎಂಬ ರೋಗನಿರೋಧಕ ಶಕ್ತಿ ಹೆಚ್ಚಿರುತ್ತದೆ. ಎದೆಹಾಲು ಕುಡಿಸುವುದರಿಂದ ತಾಯಿಗೆ ಸ್ತನಕ್ಯಾನ್ಸರ್ ಬರುವುದಿಲ್ಲ. ಇದು ಮಗುವಿಗೆ ಸರಳವಾಗಿ ಜೀರ್ಣವಾಗುತ್ತದೆ. ತಾಯಿ ಮಗುವಿನ ಬಾಂದವ್ಯ ಹೆಚ್ಚಾಗುತ್ತದೆ. ಮಗುವಿನ ಬುದ್ದಿಮಟ್ಟ ಹೆಚ್ಚಾಗುತ್ತದೆ ಮತ್ತು ತಾಯಿ ಮಗುವಿನ ಪ್ರೀತಿ ವಾತ್ಸಲ್ಯ ಹೆಚ್ಚಾಗುತ್ತದೆ. ಪ್ರತಿದಿನ 08 ರಿಂದ 10 ಬಾರಿ ತಾಯಿಯ ಎದೆಹಾಲು ನೀಡಬೇಕು. ಎದೆಹಾಲು ತಾಯಂದಿರಲ್ಲಿ ಹೆಚ್ಚಾಗಬೇಕಾದರೆ ಪೌಷ್ಠಿಕ ಆಹಾರ ಸೇವನೆ ಮಾಡಬೇಕು ಎಂದು ತಿಳಿಸಿದರು.
ಭಾಗ್ಯನಗರ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ರೋಜನ್ನ ಅವರು ಮಾತನಾಡಿ, ರಕ್ತಹಿನತೆ, ತೀವ್ರಗೊಂಡ ಮಿಷನ್ ಇಂದ್ರಧನುಷ್ ಅಭಿಯಾನ 5.0 ಹಾಗೂ ತಾಯಿಮಕ್ಕಳ ಆರೈಕೆ ಕುರಿತು ವಿವರವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯರಾದ ಸರೋಜಾ ಅವರು ಪೌಷ್ಠಿಕ ಆಹಾರ ಮತ್ತು ವೈಯಕ್ತಿಕ ಸ್ವಚ್ಛತೆ ಕುರಿತು ವಿವರವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಸುಮಾ ಹಿರೇಮಠ, ಅಂಗನವಾಡಿ ಕಾರ್ಯಕರ್ತೆಯರಾದ ರಾಜೇಶ್ವರಿ, ಸುವರ್ಣ, ಗಾಯತ್ರಿ, ಅಂಬುಜಾ, ಸ.ಆ.ಅಧಿಕಾರಿ ಕವಿತಾ, ಆಶಾ ಕಾರ್ಯಕರ್ತೆಯರಾದ ಜ್ಯೋತಿ, ರಜಿಯಾ, ರೇಣುಕಾ ಸೇರಿದಂತೆ ಸ್ತ್ರೀಶಕ್ತಿ ಸಂಘದ ಸದಸ್ಯರು, ಗರ್ಭಿಣಿಯರು, ಬಾಣಂತಿಯರು ಕಾರ್ಯಕ್ರದಲ್ಲಿ ಭಾಗವಹಿಸಿದ್ದರು.
Comments are closed.