ಕೊಪ್ಪಳಕ್ಕೆ SDPI ಬೆಳಗಾವಿ ಚಲೋ ಜಾಥಾ ಡಿ.14ಕ್ಕೆ ಆಗಮನ : ಖಾದ್ರಿ
ಕೊಪ್ಪಳ : ಸಾಮಾಜಿಕ ನ್ಯಾಯಕ್ಕಾಗಿ ಒತ್ತಾಯಿಸಿ ಬೆಳಗಾವ ಚಲೋ ಜಾಥಾ ಕೊಪ್ಪಳಕ್ಕೆ ಡಿ.14 ರಂದು ಬೆಳಗ್ಗೆ 10 ಗಂಟೆಗೆ ಆಗಮಿಸಲಿದೆ ಎಂದು ಎಸ್ ಡಿ ಪಿ ಐ ಪಕ್ಷದ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸೈಯದ್ ಸಲೀಂ ಖಾದ್ರಿ ಹೇಳಿದರು.
ಅವರು ಮಂಗಳವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ, ಉದ್ದೇಶಿಸಿ ಮಾತನಾಡಿ ಈ ಜಾಥಾಕ್ಕೆ ಜಿಲ್ಲೆಯ ಜನತೆಯಲ್ಲಿ ಹಾಗೂ ವಿವಿಧ ಸಂಘಟನೆಗಳ ನಾಯಕರ ಬೆಂಬಲವನ್ನು ಯಾಚಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯುಸುಫ್ ಮೋದಿ ರವರು ಮಾತನಾಡಿ ಪ್ರಸ್ತುತ ಕಾಂಗ್ರೆಸ್ ಸರಕಾರದ ಯು ಟರ್ನ್ ಚಾಳಿಯನ್ನು ಬಿಡಬೇಕು ಹಾಗೂ ಜಾಥಾದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಅಹಿಂದ ಸರ್ಕಾರ, ನಾವು ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ, ಅಲ್ಪಸಂಖ್ಯಾತ, ಮತ್ತು ಹಿಂದುಳಿದ ವರ್ಗಗಳ ಹಲವು ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುತ್ತಿಲ್ಲ, ಕೇವಲ ನೆಪ ಮಾತ್ರದ ಮೌಖಿಕ ಹೇಳಿಕೆಗಳನ್ನು ನೀಡಿ ಕಣ್ಮರೆಸುವ ತಂತ್ರ ಮಾಡುತ್ತಿದೆ,ಈ ಅಸಹಾಯಕ ಯು ಟರ್ನ್ ಚಾಳಿಯನ್ನು ಖಂಡಿಸಿ, ಚಳಿಗಾಲದ ಅಧಿವೇಶನ ನಡೆಯುವ ಸುವರ್ಣಸೌಧ ಬೆಳಗಾವಿ ಚಲೋ ಹಮ್ಮಿಕೊಂಡಿದ್ದೇವೆ,ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು,
ಮುಸ್ಲಿಮರ 2 ಬಿ ಮೀಸಲಾತಿಯನ್ನು ಪುನರ್ಸ್ಮಾಪಿಸಿ ಶೇ. 8%ಕ್ಕೆ ಏರಿಸಬೇಕು,ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸಿ ಮತ್ತು ಜಾರಿಗೊಳಿಸಬೇಕು.
ವಕ್ಪ್ ಆಸ್ತಿಗಳ ರಕ್ಷಣೆ, ಒಕ್ಕೂಟ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿಯಾಗಿ ಜಾರಿಗೆ ತರಲು ಹೊರಟಿರುವ ವಕ್ಪ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಬಾರದೆನ್ನುವ ನಿರ್ಣಯವನ್ನು ಸದನದಲ್ಲಿ ಕೈಗೊಳ್ಳಬೇಕು ಎನ್ನುವುದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಿಜಾಮುದ್ದೀನ್ ,ತಾಲೂಕ ಕಾರ್ಯದರ್ಶಿ ಮಹಮ್ಮದ್ ಸಾಧಿಕ್ ,ಜಿಲ್ಲಾ ಸದಸ್ಯರಾದ ಭಾಷಾ ಸುಳೇಕಲ್ ಉಪಸ್ಥಿತರಿದ್ದರು.