ಬಾಲಮಂದಿರ ಅರೆಕಾಲಿಕ ಇಂಗ್ಲೀಷ್ ಶಿಕ್ಷಕರ ನೇಮಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

 : ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಎರಡು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಿಗೆ ಇಂಗ್ಲೀಷ್ ಶಿಕ್ಷಕರ ಒಂದು ಹುದ್ದೆಗೆ ಅರೆಕಾಲಿಕ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರೆಕಾಲಿಕ ಇಂಗ್ಲೀಷ್ ಶಿಕ್ಷಕರ ಒಂದು ಹುದ್ದೆಯನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದ್ದು, 10,000ಗಳ ಗೌರವಧನ ನೀಡಲಾಗುವುದು. ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಸಂಬಂಧಿಸಿದಂತೆ ಪದವಿ ಪಡೆದಿರಬೇಕು. 24 ರಿಂದ 38ವರ್ಷ ವಯೋಮಿತಿಯಲ್ಲಿರಬೇಕು. ಎಂಎ (ಇಂಗ್ಲೀಷ್) & ಬಿಎಡ್ ವಿದ್ಯಾರ್ಹತೆ ಜೊತೆಗೆ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು.
ಗೌರವಧನದ ಆಧಾರದ ಮೇಲೆ 2023-24ನೇ ಸಾಲಿನಲ್ಲಿ ಒಂದು ವರ್ಷದ ಅವಧಿಗೆ ಅರೆಕಾಲಿಕ ಆಧಾರದ ಮೇಲೆ ಈ ಹುದ್ದೆಗೆ ಕಾರ್ಯನಿರ್ವಹಿಸಬೇಕಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಹುದ್ದೆಯು ಅರೆಕಾಲಿಕ ಹಾಗೂ ತಾತ್ಕಾಲಿಕ ಆಧಾರದಲ್ಲಿದ್ದು, ಯಾವುದೇ ಕಾರಣಕ್ಕೂ ಸಕ್ರಮಗೊಳಿಸುವುದಿಲ್ಲ. ನೇಮಕಗೊಂಡ ಸಿಬ್ಬಂದಿಗಳ ಸೇವೆಯು ಸರ್ಕಾರದ ಅನುದಾನದ ಲಭ್ಯತೆಯ ಆಧಾರದ ಮೇಲಿರುತ್ತದೆ.
ಸ್ಥಳೀಯ ಅಭ್ಯರ್ಥಿಗಳಿಗೆ ಹಾಗೂ ಹೆಚ್ಚಿನ ಶೈಕ್ಷಣಿಕ ಅರ್ಹತೆ ಹೊಂದಿದವರಿಗೆ ಆದ್ಯತೆ ಇರುತ್ತದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.  ಆಸಕ್ತರು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ತಮ್ಮ ಸ್ವವಿವರವನ್ನು ಆಗಸ್ಟ್ 19ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: