ಲಕ್ಷ್ಯಾಂತರ ಭಕ್ತರಿಂದ ಅಂಜನಾದ್ರಿಯಲ್ಲಿ ಹನುಮಮಾಲ ವಿಸರ್ಜನೆ

0

Get real time updates directly on you device, subscribe now.

 Hanumamala Anjanadri
ಕೊಪ್ಪಳ  ): ಆಂಜನೇಯ ಸ್ವಾಮಿ ಜನ್ಮಸ್ಥಳ ಅಂಜನಾದ್ರಿಯಲ್ಲಿ ಹನುಮಮಾಲ ವಿಸರ್ಜನೆ ಕಾರ್ಯಕ್ರಮ ಲಕ್ಷ್ಯಾಂತರ ಹನುಮ ಮಾಲಾಧಾರಿಗಳಿಂದ ಶುಕ್ರವಾರ ಜರುಗಿತು. ಗುರುವಾರದಿಂದಲೇ ಆರಂಭವಾದ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ. ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ  ಆಂಜನೇಯ ಸ್ವಾಮಿಯ ಭಕ್ತರು ಆಗಮಿಸಿದ್ದರು. ಬೆಳಂ ಬೆಳಿಗ್ಗೆ ಎಲ್ಲರೂ ನೀರಿನಲ್ಲಿ ಮಿಂದೆದ್ದು ಜಯಘೋಷಗಳನ್ನು ಕೂಗುತ ಸರತಿ ಸಾಲಿನಲ್ಲಿ ನಿಂತು ಆಂಜನೇಯ ಸ್ವಾಮಿಯ ದರ್ಶನ ಪಡೆಯುತ್ತಿದ್ದದು ಕಂಡು ಬಂತು.
ಕೊಪ್ಪಳ ಜಿಲ್ಲೆ ಮಾತ್ರವಲ್ಲದೆ ಅಕ್ಕ-ಪಕ್ಕದ ಜಿಲ್ಲೆ ಮತ್ತು ಇತರೆ ರಾಜ್ಯಗಳಿಂದಲು ಹನುಮಮಾಲಧಾರಿ ಆಗಮಿಸಿದ್ದರು. ರಸ್ತೆಯಗಳಲ್ಲಿ  ಕಾಲ್ನಡಿಗೆ ಮುಖಾಂತರ ತಂಡೋಪ ತಂಡವಾಗಿ ಮತ್ತು ದೂರದ ಊರಿನಿಂದ ಬರುವ ಜನರು ವಾಹನಗಳಲ್ಲಿ ಬರುತ್ತಿರುವುದು ಕಂಡು ಬಂದಿತು. ಈ ಕಾರ್ಯಕ್ರಮಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಕೊಪ್ಪಳ ಜಿಲ್ಲಾಡಳಿತ ಉತ್ತಮ ರೀತಿಯಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿತ್ತು. ಭಕ್ತರಿಗೆ ಪ್ರಸಾದಕ್ಕಾಗಿ ವೇದಪಾಠ ಶಾಲೆಯ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಹುಗ್ಗಿ, ಅನ್ನ, ಸಾಂಬರ್, ಟೊಮಟೊ ಚಟ್ನಿ ಒಳಗೊಂಡ ಪ್ರಸಾದವನ್ನು ಭಕ್ತರು ಸವಿದರು. ಜನರಿಗೆ ನೂಕು ನುಗ್ಗಲು ಆಗದಂತೆ ಹಲವಾರು ಕೌಂಟರಗಳನ್ನು ತೆರೆದಿದ್ದರಿಂದ ಶಾಂತ ರೀತಿಯಲ್ಲಿ ಪ್ರಸಾದ ಸ್ವೀಕಾರಕ್ಕೆ ಅನುಕೂಲವಾಯಿತು. ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ, ಅಡುಗೆ ಚೆನ್ನಾಗಿ ಆಗಿದೆ ಎಂದು ಜನರು ಮಾತನಾಡುತ್ತಿದ್ದರು.
ಟ್ರಾಫಿಕ್  ಸಮಸ್ಯೆಯಾಗದಂತೆ ಮುಂಚಿತವಾಗಿ ಪೊಲೀಸರು ಪಾರ್ಕಿಂಗ್  ಸ್ಥಳ ನಿಗದಿಪಡಿಸಿದರಿಂದ ಯಾವುದೇ ಟ್ರಾಫಿಕ್ ಸಮಸ್ಯೆಗಳಾಗಲಿಲ್ಲ. ಕಾರ್ಯಕ್ರಮ ಸೂವ್ಯವಸ್ಥಿತವಾಗಿ ನಡೆಯಲು ರಚಿಸಲಾದ ವಿವಿಧ ಸಮತಿಗಳ ಕೆಲಸ ಕಾರ್ಯಗಳು ಹೇಗೆ ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿಗಳು ಆಗಾಗ ಪರಿಶೀಲನೆ ನಡೆಸುತ್ತಿದ್ದರು. ವೈದ್ಯಕೀಯ ತಂಡಗಳು. ಪೊಲೀಸ್. ಕಂದಾಯ ಇಲಾಖೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು. ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯಿಂದ ನಿಭಾಯಿಸಿದರಿಂದ ಭಕ್ತರಿಗೆ ಯಾವುದೇ ಸಮಸ್ಯೆಗಳಾಗಲಿಲ್ಲ. ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಅದರ ಕೆಳಗಡೆ ಇರುವ ಪಾದಗಟ್ಟಿಯಲ್ಲಿ ಹೂವಿನ ಅಲಂಕಾರ ಕಳೆದ ವರ್ಷಕ್ಕಿಂತಲೂ ಈ ವರ್ಷ ಚೆನ್ನಾಗಿ ಮಾಡಲಾಗಿತ್ತು. ಅಂಜನಾದ್ರಿ ಬೆಟ್ಟಕ್ಕೆ ವಿವಿಧ ಬಣ್ಣಗಳ ಲೈಟಿಂಗ್ ವ್ಯವಸ್ಥೆ ಮಾಡಿದ್ದರಿಂದ ಬೆಟ್ಟವು ರಾತ್ರಿ ಕಂಗೊಳಿಸುತ್ತಿತ್ತು.
ನಡೆದುಕೊಂಡು ಬರುವ ಹನುಮಮಾಲಾಧಾರಿಗಳಿಗೆ ಅನುಕೂಲವಾಗಲು ರಸ್ತೆಗಳ ಮಾರ್ಗ ಮಧ್ಯದ ಅಲ್ಲಲ್ಲಿ ಟೆಂಟ್‌ಗಳನ್ನು ಹೊಡೆದು ವಿಶ್ರಾಂತಿ ಸ್ಥಳಗಳನ್ನು ಮಾಡಲಾಗಿತ್ತು. ಕೆಲವು ಗ್ರಾಮಗಳಲ್ಲಿ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಿರುವುದು ಮಾರ್ಗಮಧ್ಯದಲ್ಲಿ ಕಂಡು ಬರುತಿತ್ತು. ನಗರಸ್ಥಳೀಯ ಸಂಸ್ಥೆಗಳ ವತಿಯಿಂದ ಎಲ್ಲಾ ಕಡೆ ಸ್ವಚ್ಚತೆ ಕಾಪಡಲು ಹಲವಾರು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿತ್ತು. ಪೊಲೀಸವರು ವಾಹನಗಳನ್ನು ಪಾರ್ಕಿಂಗಗಾಗಿ ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸುವಂತೆ ಬರುವ ವಾಹನಗಳಿಗೆ ನಿರ್ದೇಶನ ನೀಡುತ್ತಿದ್ದರು. ಪ್ರಮುಖ ರಸ್ತೆಗಳು, ಅಂಜನಾದ್ರಿಯ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಶೇಷ ನಿಗಾ ವಹಿಸಲಾಗಿತ್ತು.
ಅಂಜನಾದ್ರಿಗೆ ಲಕ್ಷ್ಯಾಂತರ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಎಲ್ಲಾ ರೀತಿಯ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸಿತ್ತು. ಕುಡಿಯುವ ನೀರು, ಸ್ನಾನಗೃಹಗಳು, ವಾಹನಗಳಿಗೆ ಪಾರ್ಕಿಂಗ್, ಪ್ರಸಾದ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಸಹಾಯವಾಣಿ, ಅಗತ್ಯ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜನೆ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಲಾಗಿದ್ದರಿಂದ ಹನುಮ ಮಾಲಾಧಾರಿಗಳು ಸೇರಿದಂತೆ ಎಲ್ಲರಿಗೂ ಅನುಕೂಲವಾಯಿತು. ಈ ಮೂಲಕ ಡಿಸೆಂಬರ್ 12 ಮತ್ತು ಡಿಸೆಂಬರ್ 13ರಂದು ಎರಡೂ ದಿನಗಳ ಕಾಲ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಜಿಲ್ಲೆಯ ಸಚಿವರು, ಸಂಸದರು, ಶಾಸಕರು ಹಾಗೂ ಇತರೆ ಜನಪ್ರತಿನಿಧಿಗಳ ಸಹಕಾರ ಮತ್ತು ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಎಲ್ ಅರಸಿದ್ದಿ ಹಾಗೂ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಹಾಗೂ ಇತರ ಅಧಿಕಾರಿಗಳು ಅಂಜನಾದ್ರಿ ಬೆಟ್ಟಕ್ಕೆ ನಿರಂತರವಾಗಿ ಭೇಟಿ ನೀಡಿ ಅಲ್ಲಿನ ಕೆಲಸ ಕಾರ್ಯಗಳ ಬಗ್ಗೆ ಪರಿಶೀಲಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಯುವಂತೆ ನೋಡಿಕೊಂಡರು.

Get real time updates directly on you device, subscribe now.

Leave A Reply

Your email address will not be published.

error: Content is protected !!