`ವಿಧಾನ ಸೆ ಸಮಾಧಾನ’: ಡಿ. 17ರಂದು ಮಹಿಳೆಯರಿಗಾಗಿ ಕಾನೂನು ಅರಿವು ಕಾರ್ಯಕ್ರಮ

Get real time updates directly on you device, subscribe now.

 ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವ ದೆಹಲಿ, ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ, ಕೊಪ್ಪಳ ಇವರ ಸಹಯೋಗದಲ್ಲಿ “ವಿಧಾನ ಸೆ ಸಮಾಧಾನ” ಎಂಬ ಮಹಿಳೆಯರಿಗಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಡಿಸೆಂಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರಸಭೆ ಹಿಂದುಗಡೆಯ ಕ್ರಿಸ್ತ ಜ್ಯೋತಿ ಚರ್ಚ್ನಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ತಾಲ್ಲೂಕು ಪಾಸ್ರ‍್ಸ್ ಅಸೋಸಿಯೇಷನ ಅಧ್ಯಕ್ಷರಾದ ರೆವೆರೆಂಡ ಜೆ.ರವಿಕುಮಾರ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಕಲ್ವಾರಿ ಚಾಪಲ ಟ್ರಸ್ಟ್ ಮುಖ್ಯಸ್ಥರಾದ ರೆವೆರೆಂಡ ನವನೀತ ಕುಮಾರ ಪಾಲ್ಗೊಳ್ಳುವರು.
ಅತಿಥಿ ಉಪನ್ಯಾಸಕರಾಗಿ ಕೊಪ್ಪಳ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಸರಸ್ವತಿದೇವಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ, ಪ್ರಧಾನ ದಿವಾಣಿ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಭಾಗ್ಯಲಕ್ಷ್ಮೀ, ಹಿರಿಯ ವಕೀಲರಾದ ಶ್ಯಾಮಸುಂದರ ಹುಣಸಿಮರದ ಹಾಗೂ ಕೊಪ್ಪಳ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಶಾಲಿನಿ ಪೋಲಿಸ್ ಪಾಟೀಲ್ ಆಗಮಿಸುವರು ಎಂದು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!