CM ಸಿದ್ದರಾಮಯ್ಯ ಜನ್ಮ ದಿನಾಚರಣೆ : ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಕಿಟ್, ಹಾಲು ಬ್ರೆಡ್ ವಿತರಣೆ

Get real time updates directly on you device, subscribe now.

ಮುಖ್ಯಮಂತ್ರಿ

ಗಂಗಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪರವಾದ ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಜನರ ಆಶೀರ್ವಾದದಲ್ಲಿ ಜಯಭೇರಿ ಪಡೆದು ಐದು ಗ್ಯಾರಂಟಿ ಯೋಜನೆಗಳ ಮುಖಾಂತರ ಜನಸಾಮಾನ್ಯರು ಮತ್ತು ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ ಪಡುತ್ತಿದ್ದಾರೆ. ದೇವರು ಅವರಿಗೆ ಆಯು? ಆರೋಗ್ಯ ಮತ್ತು ಅಧಿಕಾರವನ್ನು ಶಾಶ್ವತವಾಗಿ ನೀಡಲಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಾರಿಗೆ ಇಲಾಖೆ ನಿವೃತ್ತ ಅಧಿಕಾರಿ ಜೆ.ಬಿ. ಲಕ್ಷ್ಮಣಗೌಡ ಅವರು ಹೇಳಿದರು.
ಅವರು ನಗರದ ಆನೆಗೊಂದಿ ರಸ್ತೆಯಲ್ಲಿರುವ ಎಂಸಿಎಚ್ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮದಿನದ ನಿಮಿತ್ಯ ರೋಗಿಗಳಿಗೆ ಮತ್ತು ಮಕ್ಕಳಿಗೆ ಕಿಟ್ ಮತ್ತು ಹಾಲು ಬ್ರೆಡ್ ವಿತರಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಅನೇಕ ಯೋಜನೆಗಳನ್ನು ಘೋ?ಣೆ ಮಾಡಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಪ್ರತಿಯೊಬ್ಬ ಕನ್ನಡಿಗರು ಅವರಿಗೆ ಸಾತ್ ನೀಡುವ ಮೂಲಕ ಅವರ ಶಕ್ತಿ ಬಲಪಡಿಸಬೇಕು. ಪ್ರತಿಯೊಬ್ಬರೂ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಪಡೆದು ಮುಖ್ಯವಾಹಿನಿಗೆ ಬರಬೇಕು. ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮ ಸಮಾಜದ ಕನಸನ್ನು ನನಸು ಮಾಡುವಂತೆ ಲಕ್ಷ್ಮಣಗೌಡರು ಹೇಳಿದರು.
ಈ ಸಂದರ್ಭದಲ್ಲಿ ಡಾ|| ರಾಘವೇಂದ್ರ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವರ್ಗದವರಾದ ಮಂಜುನಾಥ ಯಮನೂರ, ಸಿದ್ದರಾಮಯ್ಯನವರ ಅಭಿಮಾನಿಗಳಾದ ಜಿ. ಅಶೋಕಗೌಡ, ನೀಲಕಂಠಪ್ಪ ಹೊಸಳ್ಳಿ, ಕೆ. ಕೃ?, ರಾಮಣ್ಣ, ಕುಬೇರಪ್ಪ, ಬಸವರಾಜ್, ಗಂಗಾಧರ, ರಮೇಶ್ ಸೇರಿ ಅನೇಕರು ಉಪಸ್ಥಿತರಿದ್ದರು.

 

Get real time updates directly on you device, subscribe now.

Comments are closed.

error: Content is protected !!