ಸಖಿ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಅರ್ಜಿ ಅಭ್ಯರ್ಥಿಗಳಿಂದ ಆಹ್ವಾನ

Get real time updates directly on you device, subscribe now.

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಉದ್ದೇಶ ಹೊಂದಿರುವ “ಸಖಿ” (ಒನ್ ಸ್ಟಾಪ್ ಸೆಂಟರ್) ಕೇಂದ್ರ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಒಂದು ಕೇಸ್ ವರ್ಕರ್/ಸೋಶಿಯಲ್ ವರ್ಕರ್ ಹಾಗೂ ಒಂದು ಪ್ಯಾರಾಲೀಗಲ್ ಪರ್ಸನಲ್ ಲಾಯರ್ ಹುದ್ದೆಗಳನ್ನು ಮಾಸಿಕ ಗೌರವಧನವನ್ನಾಧರಿಸಿ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 ಕೇಸ್ ವರ್ಕರ್/ಸೋಶಿಯಲ್ ವರ್ಕರ್ ಹುದ್ದೆಗೆ ಬಿ.ಎಸ್.ಡಬ್ಲ್ಯೂ, ಬಿಎ (ಸಮಾಜಶಾಸ್ತ್ರ) ಅಥವಾ ಮಹಿಳಾ ಅಧ್ಯಯನದಲ್ಲಿ ಪದವಿ (02 ವರ್ಷಗಳ ಅನುಭವದೊಂದಿಗೆ) ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಪ್ಯಾರಾಲೀಗಲ್ ಪರ್ಸನಲ್ ಲಾಯರ್ ಹುದ್ದೆಗೆ ಕಾನೂನು ಪದವಿಯೊಂದಿಗೆ 2 ರಿಂದ 3 ವರ್ಷಗಳ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. ಒಂದಕ್ಕಿAತ ಹೆಚ್ಚಿನ ಹುದ್ದೆಗೆ ಅರ್ಜಿ ಸಲ್ಲಿಸಬಯಸಿದ್ದಲ್ಲಿ ಪ್ರತ್ಯೇಕವಾಗಿ ಹುದ್ದೆವಾರು ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಯವರು ಸಖಿ (ಒನ್ ಸ್ಟಾಪ್ ಸೆಂಟರ್) ಮಾರ್ಗಸೂಚಿಗಳನ್ವಯ 24*7 (ಶಿಫ್ಟ್ ಡ್ಯೂಟೀಸ್) ಕಾರ್ಯನಿರ್ವಹಿಸಲು ಸಿದ್ಧರಿರಬೇಕು. ಈ ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, 11 ತಿಂಗಳಿಗೆ ಗೌರವಧನ ಸೇವೆ ಆಗಿರುತ್ತದೆ. ತಮ್ಮ ಸೇವೆಯು ತೃಪ್ತಿಕರವಾಗಿಲ್ಲವೆಂದು ಕಂಡುಬAದಲ್ಲಿ ಯಾವುದೇ ಮುಚ್ಚಳಿಕೆ ಅಥವಾ ನೋಟೀಸ್ ನೀಡದೇ ತೆಗೆದು ಹಾಕುವ ಅಧಿಕಾರವು ಜಿಲ್ಲಾಧಿಕಾರಿಗಳಿಗೆ ಇರುತ್ತದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ ಸಮಿತಿಯನಿರ್ಣಯವೇ ಅಂತಿಮವಾಗಿರುತ್ತದೆ.
ಅಭ್ಯರ್ಥಿಯ ಆಯ್ಕೆಯನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಮೆರಿಟ್, ಅನುಭವ ಆಧಾರ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಅನುಮೋದನೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಕಾಲಕಾಲಕ್ಕೆ ನೀಡುವ ಸೂಚನೆಗಳು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಇಂಗ್ಲೀಷ್ ಮತ್ತು ಕನ್ನಡ ಕಂಪ್ಯೂಟರ್ ಜ್ಞಾನದಲ್ಲಿ ಪರಿಣಿತಿ ಹೊಂದಿರಬೇಕು. ಅಗತ್ಯವಿದ್ದಲ್ಲಿ ಕಂಪ್ಯೂಟರ್ ಜ್ಞಾನ ಪರೀಕ್ಷೆಯನ್ನು ನಡೆಸಲಾಗುವುದು. ಈ ಕ್ಷೇತ್ರದಲ್ಲಿ ಅನುಭವ ಹೊಂದಿದವರಿಗೆ ಪ್ರಾಮುಖ್ಯತೆ ನೀಡಲಾಗುವುದು. ಸಖಿ (ಒನ್ ಸ್ಟಾಪ್ ಸೆಂಟರ್) ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು, ಕನ್ನಡ ಇಂಗ್ಲೀಷ್ ಹಿಂದಿ ಭಾಷೆಗಳಲ್ಲಿ ಓದಲು ಬರೆಯಲು ಮತ್ತು ಮಾತನಾಡಲು ನಿಪುಣರಾಗಿರಬೇಕು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕಡ್ಡಾಯವಾಗಿ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿರಬೇಕು. ಅಭ್ಯರ್ಥಿ ಹುದ್ದೆಗೆ ಅನುಗುಣವಾಗಿ ಅಂಗೀಕೃತ ಕಾಲೇಜು ಅಥವಾ ವಿಶ್ವ ವಿದ್ಯಾಲಯಗಳಿಂದ ಶಿಕ್ಷಣ ಪಡೆದಿರಬೇಕು. ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗೌರವಧನ ಹೊರತುಪಡಿಸಿ ಯಾವುದೇ ಭತ್ಯೆ ನೀಡಲಾಗುವುದಿಲ್ಲ. ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದ ಲಭ್ಯತೆಯ ಮೇಲೆ ಗೌರವಧನ ನೀಡಲಾಗುವುದು. ಈ ಹುದ್ದೆಗಳು ತಾತ್ಕಾಲಿಕವಾಗಿರುವುದರಿಂದ ಯಾವುದೇ ಮೀಸಲಾತಿಗಳು ಅನ್ವಯಿಸುವುದಿಲ್ಲ.
ಅರ್ಹ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರವನ್ನೊಳಗೊಂಡ ಅರ್ಜಿ ನಮೂನೆ, ಎಸ್.ಎಸ್.ಎಲ್.ಸಿ ಅಂಕ ಪಟ್ಟಿ, ಹುದ್ದೆಗೆ ನಿಗದಿಪಡಿಸಿದ ಹಾಗೂ ವಿದ್ಯಾರ್ಹತೆಯ ಅಂಕಪಟ್ಟಿಗಳು, ಅನುಭವ ಪ್ರಮಾಣ ಪತ್ರಗಳು, ಕನಿಷ್ಠ 06 ತಿಂಗಳು ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ, ಕಡ್ಡಾಯವಾಗಿ ತಹಶೀಲ್ದಾರರವರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಲಗತ್ತಿಸಬೇಕು. ಈ ಎಲ್ಲಾ ಅಗತ್ಯ ದಾಖಲಾತಿಗಳನ್ನು ಕಡ್ಡಾಯವಾಗಿ ದೃಢಿಕರಿಸಿ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ಅಂತಹ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
ಅರ್ಹ ವಿದ್ಯಾರ್ಹತೆ ಹೊಂದಿರುವ ಸರ್ಕಾರ ನಿಗದಿಪಡಿಸಿರುವ ವಯೋಮಿತಿಯೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು 2025ರ ಜನವರಿ 9 ರೊಳಗೆ ಸಾಯಂಕಾಲ 5.30 ಗಂಟೆಯೊಳಗಾಗಿ ಪಡೆದುಕೊಂಡು, ಅಗತ್ಯ ಎಲ್ಲಾ ದಾಖಲಾತಿಗಳೊಂದಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ರವರ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಕೆಲಸ ಅವಧಿಯೊಗೆ ಬಂದು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!