ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

0

Get real time updates directly on you device, subscribe now.

ಕೊಪ್ಪಳ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ 2024-25 ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಿಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಾವಲಂಬಿ ಸಾರಥಿ ಯೋಜನೆಯಡಿ ಫುಡ್ ಕಾರ್ಟ- ಉದ್ದೇಶಗಳಿಗೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿಸಾಕಾಣಿಕೆ ಉದ್ದೇಶಗಳಿಗೆ ಸೌಲಭ್ಯ ಪಡೆಯಲು ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ 1,50,000 ರೂ. ಮತ್ತು ನಗರ ಪ್ರದೇಶದಲ್ಲಿ 3,00,000 ರೂ.ಗಳ ಮಿತಿಯಲ್ಲಿರಬೇಕು. ಸ್ವಾವಲಂಬಿ ಸಾರಧಿ ಯೋಜನೆ ಅರ್ಜಿದಾರರು ಕನಿಷ್ಠ 21 ವರ್ಷಗಳಿಂದ ಗರಿಷ್ಟ 50 ವರ್ಷದೊಳಗಿರಬೇಕು. ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು ಮತ್ತು ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
2023-24 ಮತ್ತು 2024-25ನೇ ಸಾಲಿನಲ್ಲಿ ಈ ಯೋಜನೆಗಳಡಿ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಈಗಾಗಲೆ ಈ ಸಾಲುಗಳಲ್ಲಿ ಈ ಯೋಜನೆಯಡಿ ಅರ್ಜಿ ಸಲ್ಲಿಸಿದವರು ಉದ್ದೇಶ ಬದಲಾವಣೆಗೆ ಇಚ್ಚಿಸಿದಲ್ಲಿ ನೇರವಾಗಿ ನಿಗಮದ ವೆಬ್‌ಸೈಟ್  https//swdcorp.karnataka.gov.in/ADCL portal ನಲ್ಲಿ ಉದ್ದೇಶ ಬದಲಾವಣೆ ಮಾಡಿಕೊಳ್ಳುವ ಬಗ್ಗೆ ಅವಕಾಶ ಕಲ್ಪಿಸಲಾಗಿದೆ. ವಾಹನಗಳಿಗೆ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳು ಡ್ರೈವಿಂಗ್ ಲೈಸಸನ್ನ ಹೊಂದಿರಬೇಕು. ಪುಡ್ ಕಾರ್ಟ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರ, ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಸಲುವಾಗಿ ಮಾತ್ರ ಬ್ಯಾಂಕುಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುವುದು.
ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್
https:.karnataka.gov.in ನಲ್ಲಿ ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್‌ಲೈನ್ ಮುಖಾಂತರ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳುವಂತೆ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!