ಕೊಪ್ಪಳ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಪದವಿ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

0

Get real time updates directly on you device, subscribe now.

 ಕೊಪ್ಪಳ ಡಿಸೆಂಬರ್ 17 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 25 ರವರೆಗೆ ವಿಸ್ತರಿಸಲಾಗಿದೆ.
 2024-25ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಗೆ ಸಂಧಿಸಿದಂತೆ ಅರ್ಜಿ ಸಲ್ಲಿಕೆಗೆ ನ.30 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಪ್ರಸ್ತುತ ವಿದಾರ್ಥಿಗಳ ಹಿತದೃಷ್ಠಿಯಿಂದ ಈ ಅವಧಿಯನ್ನು ಡಿ.25 ರವರೆಗೆ ವಿಸ್ತರಿಸಲಾಗಿದೆ.ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅದರ ಒಂದು ಪ್ರತಿ ಜೊತೆಗೆ ಸಂಬಂಧಪಟ್ಟ ದಾಖಲಾತಿಗಳ ನಕಲು ಪ್ರತಿಯನ್ನು ದೃಢೀಕರಿಸಿ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಸಲ್ಲಿಸಬೇಕು.
ಅರ್ಜಿ ಶುಲ್ಕಗಳ ವಿವರ ಹಾಗೂ ಅರ್ಜಿಗಳನ್ನು ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳಿಗೆ ಸಂಬಂಧಿಸಿದ ಮಾಹಿತಿಯನ್ನು ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಪ್ರವೇಶಾತಿ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಅವರಣ, 4ನೇ ಮಹಡಿ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದುದಾಗಿದೆ ಎಂದು ಕೊಪ್ಪಳ ವಿವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!