ಪ್ರವಾಸೊದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

0

Get real time updates directly on you device, subscribe now.

  ಪ್ರವಾಸೋದ್ಯಮ ಇಲಾಖೆಯಿಂದ 2024-25 ನೇ ಸಾಲಿನ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೊದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ
ಅರ್ಜಿ ಅಹ್ವಾನಿಸಲಾಗಿದೆ.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಪುಡ್ ಕ್ರಾಪ್ಟ್ ಇನ್ಸ್ಟಿಟ್ಯೂಟ್ (ಎಫ್.ಸಿ.ಐ) ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (ಐ.ಹೆಚ್.ಎಂ) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸದೆ.
ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಡಿಸೆಂಬರ್ 28 ರೊಳಗಾಗಿ ಅರ್ಜಿ ಸಲ್ಲಿಸಬೇಕು.
 ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ ಜಿಲ್ಲಾಡಳಿತ ಭವನ, ಹೋಸಪೇಟೆ ರಸ್ತೆ, ಕೊಪ್ಪಳ ಕಛೇರಿ ಅಥವಾ ದೂ.ಸಂ 08539-225566 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!