ಡಿ. 27ಕ್ಕೆ ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ ಕೊಪ್ಪಳ ಜಿಲ್ಲೆ ಪ್ರವೇಶ : ಬಾಲಕೃಷ್ಣ ನಾಯ್ಡು

0

Get real time updates directly on you device, subscribe now.

ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ ಹಾಗೂ ಪರ್ಯಾವರಣ ಟ್ರಸ್ಟ್ ಶಿವಮೊಗ್ಗ ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ನಿರ್ಮಲ ತುಂಗಭದ್ರಾ ಅಭಿಯಾನದ ಎರಡನೇ ಹಂತದ ಪಾದಯಾತ್ರೆ ಇದೇ ಡಿಸೆಂಬರ್ 22 ರಿಂದ ಹರಿಹರದ ಹತ್ತಿರದ ಐರಣಿ ಮಠದಿಂದ  ಬೃಹತ್ ಜಲ ಜಾಗೃತಿ ಪಾದಯಾತ್ರೆ ಪ್ರಾರಂಭಗೊಂಡು,

ಇದೇ ಡಿಸೆಂಬರ್ 27 ರಂದು ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ತಂಡವು ಹುಲಿಗಿ ಗ್ರಾಮದ ಮೂಲಕ ಕೊಪ್ಪಳ ಜಿಲ್ಲೆಯನ್ನು ಪ್ರವೇಶಿಸಿ, ಡಿಸೆಂಬರ್ 30ರಂದು ಗಂಗಾವತಿಯಲ್ಲಿ ಪಾದಯಾತ್ರೆ ಸಮಾರೋಪ ಸಮಾವೇಶಗೊಳ್ಳಲಿದೆ ಎಂದು ಪರ್ಯಾವರಣ ಟ್ರಸ್ಟ್ ಮುಖ್ಯಸ್ಥರು ಹಾಗೂ ನಿರ್ಮಲ ತುಂಗಭದ್ರಾ ಅಭಿಯಾನದ ಸಂಚಾಲಕರು ಬಾಲಕೃಷ್ಣ ನಾಯ್ಡು ರವರು ತಿಳಿಸಿದರು.
ಮುಂದುವರೆದು ಮಾತನಾಡಿ, ಈ ಒಂದು ಕಾರ್ಯಕ್ರಮಕ್ಕೆ ಜಿಲ್ಲಾಡಳಿತದ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾಡಳಿತದ   ಅಪರ ಜಿಲ್ಲಾಧಿಕಾರಿಗಳಾದ  ಸಿದ್ದರಾಮೇಶ್ವರರನ್ನು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ   ರಾಹುಲ್  ರತ್ನಂ ಪಾಂಡೆಯ ಅವರನ್ನು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ಧಿ ಅವರನ್ನು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ ಬಿಕೆ ರವಿ ರವರನ್ನು ಇಂದು ಆಹ್ವಾನಿಸಲಾಯಿತು. ಇದೇ ವೇಳೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪೊಲೀಸ್ ಇಲಾಖೆಯ ಸಹಕಾರ ಕೋರಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡುವುದಾಗಿ, ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಭರವಸೆ ನೀಡಿದರು ಎಂದು ಹೇಳಿದರು.
ಈ ವೇಳೆ ನಿರ್ಮಲ ತುಂಗಭದ್ರಾ ಅಭಿಯಾನದ ಸದಸ್ಯರು ಎಸ್ ಎಂ ಲೋಕೇಶ್ವರಪ್ಪ, ಹಾಗೂ ಗ್ರಾಮೀಣ ಭಾರತಿ 90.4FM ನ  ನಿರ್ದೇಶಕರು ರಾಘವೇಂದ್ರ ತೂನ ಇದ್ದರು

Get real time updates directly on you device, subscribe now.

Leave A Reply

Your email address will not be published.

error: Content is protected !!