ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಶಿಕ್ಷೆ
ಕೊಪ್ಪಳ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಶೌಕತ್‌ಅಲಿ ಗುಡ್ಡದಬಾವಿ ಸಾ: ಕುಷ್ಟಗಿ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ [ಪೋಕ್ಸೊ] ಕೊಪ್ಪಳ ರವರು ಆರೋಪಿಗೆ ಶಿಕ್ಷೆ ವಿಧಿಸಿರುತ್ತಾರೆ.
ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಷ್ಟಗಿ ಪಟ್ಟಣ ನಿವಾಸಿ ಶೌಕತ್‌ಅಲಿ ಗುಡ್ಡದಬಾವಿ ಇತನು ಅಪ್ರಾಪ್ತ ವಯಸ್ಸಿನ ಬಾಧಿತಳಿಗೆ ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದರಿAದ ಬಾಧಿತಳು ಅವನೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದು 2023ರ ಏಪ್ರಿಲ್ 3ರಂದು ಬಾಧೀತಳು ಟ್ಯೂಶನ್ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ಮಶೀದಿ ಹತ್ತಿರ ಎಲ್ಲಿಯಾದರೂ ಹೋಗಿ ಮದುವೆಯಾಗೋಣ ಎಂದು ಹೇಳಿ ತನ್ನ ಸಂಬAಧಿಕರ ಮನೆಗೆ ಕರೆದುಕೊಂಡು ಹೋಗಿ ಅದೇ ದಿನ ಸಂಬಂಧಿಕರ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ ನಂತರ ಬಾಧಿತಳಿಗೆ ಆರೋಪಿತನು ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಮರುದಿನ ಕೂಡ ಅತ್ಯಾಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕುಷ್ಟಗಿ ಪೋಲಿಸ ಠಾಣೆಯ ಪಿ.ಎಸ್.ಐ ಚಂದ್ರಶೇಖರ ಅವರು ದೂರು ಸ್ವೀಕರಿಸಿದ್ದರು. ಪ್ರಕರಣದ ತನಿಖೆಯನ್ನು ಸಿಪಿಐ ನಿಂಗಿಪ್ಪ ಅವರು ನಿರ್ವಹಿಸಿದ್ದು, ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಭಿತಾಗಿದ್ದರಿಂದ ಆರೋಪಿತನ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವು ಸ್ಪೇ.ಎಸ್‌ಸಿ[ಪೋಕ್ಸೊ] ಸಂ: 30/2023ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿ ಶೌಕತ್‌ಅಲಿ ಗುಡ್ಡದಬಾವಿ ಸಾ: ಕುಷ್ಟಗಿ ಇತನ ಮೇಲಿನ ಆರೋಪಣೆಗಳು ಸಾಭೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 30,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ[ಪೋಕ್ಸೊ] ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು 2024ರ ಡಿಸೆಂಬರ್ 5ರಂದು ತೀರ್ಪು ಹೊರಡಿಸಿರುತ್ತಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ಅವರು ಈ ಪ್ರಕರಣ ನಡೆಸಿ ವಾದ ಮಂಡಿಸಿದ್ದರು. ಕುಕನೂರ ಪೊಲೀಸ್ ಠಾಣೆಯ ಸಿಬ್ಬಂದಿ ಹನುಮೇಶ ಜಗ್ಗಲ್ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಸಕಾಲಕ್ಕೆ ಹಾಜರಪಡಿಸುವಲ್ಲಿ ಸಾಕಷ್ಟು ಸಹಕರಿಸಿರುತ್ತಾರೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.