ಮತದಾರರ ಪಟ್ಟಿ ಪರಿಷ್ಕೃತ ಮಾಹಿತಿ ನಿಖರವಾಗಿರಲಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್

0

Get real time updates directly on you device, subscribe now.

ಕೊಪ್ಪಳ ): ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕುವುದು ಮತ್ತು ತಿದ್ದುಪಡಿಯ ಮಾಹಿತಿಯನ್ನು ನಿಖರವಾಗಿರಬೇಕೆಂದು ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಮತದಾರರ ಪಟ್ಟಿ ವೀಕ್ಷಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್ ಹೇಳಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಯ ಕುರಿತು ಮಾಹಿತಿ ಪಡೆಯಲು ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮತದಾರರ ಪಟ್ಟಿಯಲ್ಲಿ ಜನರು ತಮ್ಮ ಹೆಸರು ಸೇರ್ಪಡೆ, ಸ್ಥಳ ಬದಲಾವಣೆ ಮತ್ತು ತಿದ್ದುಪಡಿ ಮಾಡಲು ಆನಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದಾಗ ಅವುಗಳನ್ನು ಸರಿಯಾಗಿ ಪರಿಶೀಲನೆ ಮಾಡಬೇಕು. ಪ್ರತಿ ತಾಲ್ಲೂಕಿನಲ್ಲಿ ಎಷ್ಟು ಜನರು ಬೇರೆ ಕಡೆ ಹೋಗಿದ್ದಾರೆ. ಹೊಸದಾಗಿ ಎಷ್ಟು ಜನ ಸೇರ್ಪಡೆಯಾದರು ಎಂಬ ಮಾಹಿತಿಯನ್ನು ತಮ್ಮಲ್ಲಿ ಇರಬೇಕೆಂದು ಹೇಳಿದರು.
ತಾವು ಈ ಕೆಲಸವನ್ನು ಸರಿಯಾಗಿ ಮಾಡಿದ್ದಿರಾ ಎಂಬುದಕ್ಕೆ ನನಗೆ ಸ್ಯಾಂಪಲ್ ಬೇಕು. ತಾವು ನೀಡಿದ ಮಾಹಿತಿ ಸರಿಯಾಗಿ ಇದೆಯಾ ಇಲ್ಲಾ ಎಂದು ಮನೆಗಳಿಗೆ ಭೇಟಿ ನೀಡಿದಾಗ ನನಗೆ ತಿಳಿಯುತ್ತದೆ. ಮತದಾರರ ಪಟ್ಟಿಯ ಕುರಿತು ಮಾಹಿತಿ ಪಡೆಯಲು ಇದು ನನ್ನ ಎರಡನೆ ಭೇಟಿಯಾಗಿದೆ. ಬಿ.ಎಲ್.ಓ ಗಳು ಚುನಾವಣೆ ಬಂದಾಗ ಮಾತ್ರ ಸರಿಯಾಗಿ ಕೆಲಸ ಮಾಡುತ್ತಾರೆ ಹಾಗಾಗಿ ಆಯಾ ತಾಲೂಕಿನ ತಹಶೀಲ್ದಾರರು ಮತದಾರರ ಪಟ್ಟಿಯ ನಿಖರವಾದ ಮಾಹಿತಿ ತಮಗೆ ತಿಳಿದಿರಬೇಕೆಂದು ಹೇಳಿದರು.
ಈ ಸಭೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಚುನಾವಣಾ ತಹಶಿಲ್ದಾರ ನಾಗರಾಜ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ತಹಶಿಲ್ದಾರರು ಉಪಸ್ಥಿತರಿದ್ದರು.
ಸಭೆಯ ನಂತರ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕುಕನೂರು ತಾಲ್ಲೂಕಿನ ತಳಕಲ್ ಗ್ರಾಮಕ್ಕೆ ಕ್ಷೇತ್ರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ, ಮೃತರ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಬಗ್ಗೆ ಖುದ್ದಾಗಿ ಪರಿಶೀಲಿಸಿ, ಮತದಾರರ ಪಟ್ಟಿಯ ಮಹಿತಿಯನ್ನು ಸ್ಪಷ್ಟ ಹಾಗೂ ನಿಖರವಾಗಿರುವಂತೆ ನೋಡಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Get real time updates directly on you device, subscribe now.

Leave A Reply

Your email address will not be published.

error: Content is protected !!