C T Ravi ಬಂಧನ ಖಂಡಿಸಿ  ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

0

Get real time updates directly on you device, subscribe now.

ಭಾರತೀಯ ಜನತಾ ಪಾರ್ಟಿ ಕೊಪ್ಪಳ ಜಿಲ್ಲೆ ವತಿಯಿಂದ ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ C T Ravi ಅವರ ಬಂಧನ ಖಂಡಿಸಿ  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೊಪ್ಪಳದಲ್ಲಿ ಪ್ರತಿಭಟನೆ ಮಾಡಲಾಯಿತು.

ಕೊಪ್ಪಳದ ಬಸವೇಶ್ವರ ವೃತ್ತದಲ್ಲಿ ಬಳಿ ಮಾಜಿ ಸಚಿವರು ಹಾಗೂ ವಿಧಾನಪರಿಷತ್ ಸದಸ್ಯರಾದ  ಸಿ. ಟಿ. ರವಿ ಬಂಧನ ಖಂಡಿಸಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ  ಸುವರ್ಣಸೌಧದೊಳಕ್ಕೆ ನುಗ್ಗಿ ಕೆಲವು  ಪುಡಾರಿಗಳು, ರೌಡಿಗಳು ದಾಂಧಲೆ ನಡೆಸಿದವರು ಹಾಗೂ ನಡುರಸ್ತೆಯಲ್ಲಿ ಹಲ್ಲೆ ಮಾಡಲು ಪ್ರಚೋದನೆ ನೀಡಿದವರನ್ನೂ ಸಹ ಬಂಧಿಸಬೇಕು. ಅಲ್ಲದೇ ಸಭಾಪತಿಗಳ ಗಮನಕ್ಕೂ ತರದೆ ಏಕಾಏಕಿ ಸಿ.ಟಿ ರವಿ ಅವರನ್ನು ಬಂಧಿಸಿದ್ದು ಅಕ್ಷಮ್ಯ ಅಪರಾಧ. ಅವರು ಗಾಯವಾಗಿದ್ದರೂ ಆಸ್ಪತ್ರೆಗೆ ಕರೆದುಕೊಂಡು ಹೋಗದೇ ರಾತ್ರಿಯೆಲ್ಲಾ 400-500 ಕಿ.ಮೀ ಸುತ್ತಾಡಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಗದಗ, ರಾಮದುರ್ಗ ಸೇರಿ ಎಲ್ಲಾ ಪೊಲೀಸ್ ಸ್ಟೇಷನ್ ಸುತ್ತಾಡಿಸಿ ದ್ವೇಷ ಹಾಗೂ ಕೀಳುಮಟ್ಟದ ರಾಜಕೀಯ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕೊಳ್ಳಿ ಇಡಲು ಹೊರಟಿದೆ ಎಂದು  ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

ಪ್ರತಿಭಟನೆಯಲ್ಲಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ , ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಜಿಲ್ಲಾಧ್ಯಕ್ಷರಾದ ನವೀನ್ ಗುಳಗಣ್ಣನವರ್, ಮಾಜಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಾಂತೇಶ್ ಮೈನಳ್ಳಿ, ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷರಾದ ಚಂದ್ರು ಕವಲೂರು, ಮುಖಂಡರಾದ ಗಣೇಶ್ ಹೊರತಟ್ನಾಳ್, ರಾಜು ಬಾಕಳೆ, ಮನೋಹರ ಗೌಡ ಹೇರೂರು, ಡಿ.ಕೆ. ಆಗೋಲಿ, ಸಂಗಮೇಶ್ ಬಾಗವಾಡಗಿ, ಸೇರಿದಂತೆ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

 

Get real time updates directly on you device, subscribe now.

Leave A Reply

Your email address will not be published.

error: Content is protected !!