ಚಿತ್ರದುರ್ಗ: ರಂಗಶಿಕ್ಷಣ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಿಂದ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳಿಂದ ರಂಗಶಿಕ್ಷಣ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ರಂಗಶಿಕ್ಷಣ ಡಿಪ್ಲೋಮೊಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರವುದು ಅಗತ್ಯ. ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಇದ್ದು, ಕರ್ನಾಟಕ ಹಾಗೂ ಭಾರತದ ರಂಗ ತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯಲಿವೆ. ಒಳ್ಳೆಯ ಗ್ರಂಥ ಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈಧ್ದಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯಲಿವೆ.
ಅರ್ಜಿ ನಮೂನೆಯನ್ನು ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೆಹಳ್ಳಿ-577515, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ, ಈ ವಿಳಾಸಕ್ಕೆ ಪತ್ರ ಬರೆದು ಪ್ರವೇಶ ಅರ್ಜಿಗಳನ್ನು ತರಿಸಿಕೊಳ್ಳಬಹುದು ಅಥವಾ ರಂಗಶಾಲೆಯ ವೆಬ್‌ಸೈಟ್ www.theatreschoolsanehalli.org ನಲ್ಲಿಯೂ ಸಹ ಪ್ರವೇಶ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಜೂನ್ 30ರ ಒಳಗಾಗಿ ಅರ್ಜಿಯನ್ನು ರಂಗಶಾಲೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 9448398144, 8861043553, 9482942394 ಗೆ ಸಂಪರ್ಕಿಸಬಹುದು ಎಂದು ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ ಪ್ರಕಟಣೆ ತಿಳಿಸಿದೆ.
Comments are closed.