ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಕೊಲೆ :  ಮಗನ ಬಂಧನ

Get real time updates directly on you device, subscribe now.

ಕೊಪ್ಪಳ : ತನ್ನ ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಂದು ಹಾಕಿದ್ದ ಮಗನನ್ನು ಕೊಲೆ ಮಾಡಿದ 24 ಗಂಟೆಯೊಳಗೆ ಬಂಧಿಸುವಲ್ಲಿ ಕಾರಟಗಿಯ ಪೋಲಿಸರು ಯಶಸ್ವಿಯಾಗಿದ್ದಾರೆ.

ಜುಲೈ 31ರಂದು ರಾಘವೇಂದ್ರ ರೆಡ್ಡಿ ಎನ್ನುವ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟಿದ್ದ. ಮೊದಲು ಇದೊಂದು ಅಪಘಾತವಾಗಿರಬಹು ಎಂದು ಹೇಳಲಾಗಿತ್ತು. ಆದರೆ ಆತನ ಸಂಬಂಧಿಕರು ಆತನ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದಾಗ ಗೌಡಪ್ಪ ಅಲಿಯಾಸ್ ಗರುಡಪ್ಪ ಎನ್ನುವ ಯುವಕನ್ನು ಬಂಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ಯಶೋಧಾ ವಂಟಗೋಡಿ ತಿಳಿಸಿದ್ದಾರೆ. ನಗರದ ಎಸ್ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೊಪ್ಪಳ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ಯಶೋಧಾ ವಂಟಗೋಡಿ  ಕೊಲೆ ಮಾಡಿರುವ ಆರೋಪಿಯ ತಾಯಿಯ ಜೊತೆ ಮೃತ ವ್ಯಕ್ತಿ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯುವಕ ಆತನನ್ನು ಹತ್ಯೆ ಮಾಡಿದ್ದಾನೆ. ಇತರರು ಕೊಲೆ ಪ್ರಕರಣದಲ್ಲಿ ಭಾಗೀಯಾಗಿರುವ ಸಾಧ್ಯತೆಇದೆ ಅದರ ಬಗ್ಗೆಯೂ ತನಿಖೆ ಮುಂದುವರೆದಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ರುದ್ರೇಶ ಉಜ್ಜನಿಕೊಪ್ಪ, ಪಿಐ ಸಿದ್ದರಾಮಯ್ಯ, ಪಿಐ ಸುರೇಶ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: