ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಆಯುರ್ವೇದ ಸಮ್ಮೇಳನ ಹಾಗೂ ಕಾರ್ಯಾಗಾರ
ಕೊಪ್ಪಳದ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಹಾಗೂ ಸ್ವಸ್ಥವೃತ್ತ ವಿಭಾಗದಿಂದ ಮಾನಸಂ-೨೦೨೪ ಎಂಬ ಶೀರ್ಷಿಕೆಯಲ್ಲಿ ರಾಷ್ಟ್ರೀಯ ಆಯುರ್ವೇದ ಸಮ್ಮೇಳನ ಹಾಗೂ ಕಾರ್ಯಾಗಾರವನ್ನು ದಿನಾಂಕ ೨೭ & ೨೮ ನೇ ಡಿಸೆಂಬರ್ ೨೦೨೪ ರಂದು ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದಲ್ಲಿ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿದ್ದಾರೆ. ಇಂದಿನ ಒತ್ತಡದ ದಿನಮಾನಗಳಲ್ಲಿ ಜನರು ಮಾನಸಿಕ ಸಮತೋಲನದ ಬಗ್ಗೆ ನಿರ್ಲಕ್ಷಿಸುತ್ತಿದ್ದು, ಸಮ್ಮೇಳನದಲ್ಲಿ ಮಾನಸಿಕ ಆರೋಗ್ಯಕ್ಕೆ ಸಲಹೆ, ಹಾಗೂ ಮಾನಸಿಕ ಸಮಸ್ಯೆಗಳಿಗೆ ಆಯುರ್ವೇದ, ಯೋಗ ಹಾಗೂ ಇನ್ನಿತರ ಪದ್ಧತಿಗಳ ಮೂಲಕ ಮಾಡಬಹುದಾದ ಚಿಕಿತ್ಸಾ ಪರಿಹಾರಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ವೈದ್ಯರುಗಳು ಚರ್ಚೆ ಹಾಗೂ ಸಂವಾದ ನಡೆಸಲಿದ್ದಾರೆ. ಸ್ನಾತಕ, ಸ್ನಾತಕೋತ್ತರ ಹಾಗೂ ವೈದ್ಯರುಗಳು ತಮ್ಮ ಪ್ರಬಂಧ ಮಂಡನೆ ಮಾಡುವರು. ಸಮ್ಮೇಳನದಲ್ಲಿ ಸುಮಾರು ೪೦೦ ಜನರು ಭಾಗವಹಿಸಲಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಹಾಂತೇಶ ಸಾಲಿಮಠ ಹಾಗೂ ಸಮ್ಮೇಳನದ ಸಂಘಟನಾ ಕಾರ್ಯದರ್ಶಿಗಳಾದ ಡಾ. ಪ್ರಭು ನಾಗಲಾಪೂರ, ಡಾ. ಮಂಜುಳಾ ಕರ್ಲವಾಡ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.