ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಡಿ.30ಕ್ಕೆ ಗಾಂಧಿ ಭವನದಲ್ಲಿ ಅಭಿನಂದನೆ
ರಂಗಸಿರಿ ಹಾಸನ ಮತ್ತು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದಿಂದ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಆರ್.ಸ್ವಾಮಿ ಮತ್ತು ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ.ಮದನಗೌಡ, ಬಾನುಮುಷ್ತಾಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಾಸನದ ಗಾಂಧಿ ಭವನದಲ್ಲಿ ಡಿ.30ರಂದು ಬೆಳಿಗ್ಗೆ 10.45ಕ್ಕೆ ಆಯೋಜಿಸಿರುವ ಅಭಿನಂದನಾ ಕಾರ್ಯಕ್ರಮವನ್ನು ರಾಜ್ಯಸಭಾ ಮಾಜಿ ಸದಸ್ಯ ಹಾಗೂ ಸಾಹಿತಿ ಎಲ್.ಹನುಮಂತಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮೊದಲ ಮಾತುಗಳನ್ನಾಡಲಿದ್ದು, ರಂಗಸಿರಿ ಅಧ್ಯಕ್ಷರಾದ ಕೆ.ರಂಗಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ರಂಗಸಿರಿ ಕಾರ್ಯದರ್ಶಿ ಪಿ.ಶಾಡ್ರಾಕ್, ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್.ವೇಣುಕುಮಾರ್ ಅವರು ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸಿದ್ದಾರೆ