ಅಮಿತ್ ಶಾ ಹೇಳಿಕೆ ಖಂಡಿಸಿ ಜ. 6ರಂದು ಕೊಪ್ಪಳ ಬಂದ್‌

0

Get real time updates directly on you device, subscribe now.


ಕೊಪ್ಪಳ: ಬಾಬಾ ಸಾಹೇಬ ಬಿ.ಆ‌ರ್. ಅಂಬೇಡ್ಕ‌ರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಜನವರಿ 6 ರಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಸಮಿತಿ ಮುಖಂಡರಾದ ಅಲ್ಲಮ ಪ್ರಭು ಬೆಟ್ಟದೂರ್, ಟಿ.ರತ್ನಾಕರ್, ಹನುಮೇಶ್ ಕಡೆಮನಿ ತಿಳಿಸಿದರು.
ಅವರು ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸಂಸತ್ತು ಅಧಿವೇಶನದಲ್ಲಿ ನಡೆದ ಚರ್ಚೆ ವೇಳೆ ಗೃಹ ಸಚಿವ ಅಮಿತ್ ಶಾ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಜ.6 ರಂದು ಕೊಪ್ಪಳ ಬಂದ್ ಗೆ ಅಹಿಂದ, ಅಲ್ಪ ಸಂಖ್ಯಾತರ ಸಂಘಟನೆಗಳು ಹಾಗೂ ಬಿ.ಆ‌ರ್.ಅಂಬೇಡ್ಕ‌ರ್ ಅವರ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಬಂದ್ ದಿನ ವಾಹನಗಳ ಸಂಚಾರ ಹಾಗೂ ವ್ಯಾಪಾರ ವಹಿವಾಟು ಸಂಪೂರ್ಣ ಬಂದ್‌ ಆಗಲಿದೆ, ಈಗಾಗಲೇ ವ್ಯಾಪಾರಸ್ಥರೊಂದಿಗೆ ಚರ್ಚಿಸಲಾಗಿದೆ ಬಂದ್ ಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದರು.
ಅಂದು ನಗರದ ತಾಲೂಕ ಕ್ರೀಡಾಂಗಣದಿಂದ ಅಂಬೇಡ್ಕರ್ ಸರ್ಕಲ್, ಗಡಿಯಾರ ಕಂಬದ ಮೂಲಕ ಅಶೋಕ ಸರ್ಕಲಗೆ ಪ್ರತಿಭಟನಾ ಮೆರವಣಿಗೆ ಆಗಮಿಸುತ್ತದೆ, ಅಂದು ಬಂದ್ ಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಮುಖಂಡರಾದ ಸುಕ್ರರಾಜ್ ತಾಳಕೇರಿ, ಯಲ್ಲಪ್ಪ ಬಳಗಾನೂರು, ಕಾಶಪ್ಪ ಚಲವಾದಿ, ಸಿದ್ದರಾಮ ಹೊಸಮನಿ, ರಾಮಣ್ಣ ಚೌಡ್ಕಿ, ಸಲೀಂ ಖಾದ್ರಿ, ನಿಂಗಜ್ಜ ಚೌದ್ರಿ ಶಾಹಪುರು, ಕೆ.ಎಸ್. ಮೈಲಾರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!